LATEST NEWS
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಮೋದ್ ಮಧ್ವರಾಜ್ ವಿರುದ್ದ ಎಫ್ ಐಆರ್
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಮೋದ್ ಮಧ್ವರಾಜ್ ವಿರುದ್ದ ಎಫ್ ಐಆರ್
ಉಡುಪಿ ಎಪ್ರಿಲ್ 9: ಉಡುಪಿ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಮೇಲೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಚುನಾವಣಾ ಆಯೋಗ ಎಫ್ ಐಆರ್ ದಾಖಲಿಸಿದೆ.
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ಪುರುಷರ ವೇಟ್ ಲಿಪ್ಟಿಂಗ್ ನಲ್ಲಿ 56 ಕೆಜಿ ವಿಭಾಗದಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗಳಿಸಿಕೊಟ್ಟ ಕುಂದಾಪುರ ಗುರುರಾಜ್ ಪೂಜಾರಿ ಅವರಿಗೆ ಕ್ರೀಡಾ ನೀತಿ ಅನ್ವಯ 15 ಲಕ್ಷ ರೂಪಾಯಿ ನಗದು ಹಾಗೂ ಬಿ ಗ್ರೇಡ್ ಸರಕಾರಿ ಉದ್ಯೋಗ ದೊರೆಯಲಿದೆ ಎಂದು ಕ್ರೀಡಾ ಸಚಿವರಾಗಿರುವ ಪ್ರಮೋದ್ ಮಧ್ವರಾಜ್ ಇತ್ತೀಚೆಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು.
ಸಚಿವರ ಇದೇ ಹೇಳಿಕೆ ಈಗ ವಿವಾದವಾಗಿ ಪ್ರಮೋದ್ ಮಧ್ವರಾಜ್ ವಿರುದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಎಫ್ ಐಆರ್ ದಾಖಲಾಗಿದೆ.
ರಾಜ್ಯದಲ್ಲಿ ಕ್ರೀಡಾ ನೀತಿ ಬಗ್ಗೆ ಬಜೆಟ್ ನೋಟಿಫಿಕೇಶನ್ ಆಗಿಲ್ಲ, ಅಲ್ಲದೇ ಚುನಾವಣೆ ಸಮಯದಲ್ಲಿ ಜನಪ್ರತಿನಿಧಿಗಳು ಇಂತಹ ಹೇಳಿಕೆಗಳ ಮೂಲಕ ಮತದಾರರನ್ನು ಓಲೈಸುವುದು, ಆಮಿಷ ನೀಡಿದಂತಾಗಿದೆ ಎಂದು ಆರೋಪಿಸಿ ಚುನಾವಣಾ ಅಧಿಕಾರಿಗಳು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.