FILM
ರಿಯಲ್ ಸ್ಟಾರ್ ಉಪೇಂದ್ರ ವಿರುದ್ದ ಎಫ್ಐಆರ್
ಬೆಂಗಳೂರು ಅಗಸ್ಟ್ 13 : ಸೋಶಿಯಲ್ ಮಿಡಿಯಾದಲ್ಲಿ ಲೈವ್ ವೇಳೆ ಅವಹೇಳನಕಾರಿ ಪದ ಬಳಸಿ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ನಟ ಉಪೇಂದ್ರ ವಿರುದ್ದ ಎಫ್ಐಆರ್ ದಾಖಲಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ಸಹಾಯ ನಿರ್ದೇಶಕ ಮಧುಸೂದನ್ ಕೆ.ಎನ್. ಅವರು ದೂರು ನೀಡಿದ್ದಾರೆ. ಪರಿಶಿಷ್ಟ ಜಾತಿ– ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಆರೋಪಿ ಉಪೇಂದ್ರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
UPP ಸ್ಥಾಪನೆಯಾಗಿ ನಾಲ್ಕು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ‘ಪ್ರಜಾಕೀಯ ದಿನ’ ಆಚರಣೆ ಪ್ರಯುಕ್ತ ಫೇಸ್ ಬುಕ್ ನಲ್ಲಿ ಲೈವ್ ಬಂದಿದ್ದ ಉಪೇಂದ್ರ ಮಾತಿನ ನಡುವೆ ಬಳಸಿದ ಗಾದೆ ಮಾತಿಗೆ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ಇತರೆ ಕೆಲವು ರಾಜಕೀಯ ಪಕ್ಷಗಳಿಗಿಂತಲೂ ಹೆಚ್ಚು ಮತಗಳನ್ನು ಯಾವುದೇ ಪ್ರಚಾರವಿಲ್ಲದೆ ಪಡೆದಿದ್ದಾರೆ ಎಂದು ಹೆಮ್ಮೆಯಿಂದ ಹೇಳಲು ಬಯಸುತ್ತೇನೆ ಎಂದರು. ನಂತರ ಮಾತು ಮುಂದುವರೆಸಿ ಯಾವುದೋ ಮಾತಿಗೆ ನುಡಿಗಟ್ಟನ್ನು ಹೇಳಿದ್ದು ಈ ಮಾತಿಗೆ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ.
ಇನ್ನು ಉಪೇಂದ್ರರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿಯೂ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ತಮ್ಮ ಹೇಳಿಕೆಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಉಪೇಂದ್ರ ವಿಡಿಯೋವನ್ನು ನನ್ನ ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿದ್ದೇನು. ನನ್ನ ಹೇಳಿಕೆಗೆ ಕ್ಷಮೆಯಿರಲಿ ಎಂದು ಕ್ಷಮಾಪಣೆ ಕೇಳಿದ್ದಾರೆ.