LATEST NEWS
ಆರ್ ಎಸ್ಎಸ್ ಮುಖಂಡ ಪ್ರಭಾಕರ್ ಭಟ್ ವಿರುದ್ದ ಎಫ್ ಐಆರ್
ಆರ್ ಎಸ್ಎಸ್ ಮುಖಂಡ ಪ್ರಭಾಕರ್ ಭಟ್ ವಿರುದ್ದ ಎಫ್ ಐಆರ್
ಮಂಗಳೂರು ಎಪ್ರಿಲ್ 8: ಸಚಿವ ಯು.ಟಿ. ಖಾದರ್ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರ್ ಎಸ್ ಎಸ್ ಮುಖಂಡ ಪ್ರಭಾಕರ್ ಭಟ್ ವಿರುದ್ದ ಎಫ್ ಐಆರ್ ದಾಖಲಾಗಿದೆ.
ಬಂಟ್ವಾಳದ ಕೈರಂಗಳ ಗ್ರಾಮದ ಪುಣ್ಯಕೋಟಿ ನಗರ ಎಂಬಲ್ಲಿ ಸಚಿವ ಯು.ಟಿ ಖಾದರ್ ಎಂಬ ಕೊಳಕು ಮನುಷ್ಯ ಅಂತಹ ಗೋಮಾಂಸ ಭಕ್ಷಣೆ ಮಾಡುವಂತಹ ಆ ವ್ಯಕ್ತಿಯನ್ನು ಪವಿತ್ರ ದೇವಾಲಯ ಹಾಗು ದೈವಸ್ಥಾನಕ್ಕೆ ಕರೆಸಿ ಪ್ರಸಾದ ನೀಡುತ್ತಿರುವುದು ಎಷ್ಟುಸರಿ ಎಂದು ವಿವಾದಾತ್ಮಕ ಹೇಳಿಕೆಯನ್ನು ಆರ್ ಎಸ್ ಎಸ್ ಮುಖಂಡ ಡಾ .ಕಲ್ಲಡ್ಕ ಪ್ರಭಾಕರ ಭಟ್ ನೀಡಿದ್ದರು.
ಈ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೇಸ್ ಮುಖಂಡರು ಡಾ. ಪ್ರಭಾಕರ್ ಭಟ್ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆ ಯಲ್ಲಿ ಡಾ. ಪ್ರಭಾಕರ್ ಭಟ್ ವಿರುದ್ದ ಎಫ್ ಐ ಆರ್ ದಾಖಲಿಸಲಾಗಿದೆ.
ಬಂಟ್ವಾಳದ ಕೈರಂಗಳ ಗ್ರಾಮದ ಪುಣ್ಯಕೋಟಿ ನಗರ ಎಂಬಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರು ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ, ಚುನಾವಣಾ ಆಯೋಗದ ಅನುಮತಿ ಪಡೆಯದೆ ಸಭೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಧರ್ಮ ವಿರೋಧಿ ಬಾಷಣ ಮಾಡಿ, ಚುನಾವಣಾ ಆಯೋಗ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಸಾರ್ವಜನಿಕರಲ್ಲಿ ಗೊಂದಲ ಮತ್ತು ಅನುಮಾನ ಹುಟ್ಟಿಸುವಂತೆ ಉದ್ರೇಕಕಾರಿ ಭಾಷಣ ಮಾಡಿದ್ದಾರೆ ಎಂದು ದೂರಲಾಗಿದ್ದು , ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಪ್ರಭಾಕರ ಭಟ್ ವಿರುದ್ಧ ಕೋಣಾಜೆ ಪೊಲೀಸ್ ಠಾಣೆಯಲ್ಲಿ IPC 153(A) ಹಾಗೂ R.P.Act 125 ಅಡಿ ಎಫ್.ಐ.ಆರ್. ದಾಖಲಿಸಲಾಗಿದೆ.
ಜಿಲ್ಲೆಯಲ್ಲಿ ಡಾ. ಕಲ್ಲಡ್ಕ ಪ್ರಭಾಕರ ಭಟ್ ಶಾಂತಿ ಕದಡುವ ಪ್ರಯತ್ನ ನಡೆಸಿದ್ದು ಈ ಹಿನ್ನೆಲೆಯಲ್ಲಿ ಚುನಾವಣೆ ಮುಗಿಯುವವರೆಗೆ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಬೇಕು. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಪ್ರಕರಣ ದಾಖಲಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಒತ್ತಾಯಿಸಿದ್ದರು.
You must be logged in to post a comment Login