Connect with us

    BELTHANGADI

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್ಐಆರ್ ದಾಖಲಿಸಿದ ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ

    ಬೆಳ್ತಂಗಡಿ ಅಕ್ಟೋಬರ್ 18: ಕಳೆಂಜದಲ್ಲಿ ವಿವಾದಿತ ಅರಣ್ಯ ಇಲಾಖೆ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಹಾಕಿದ್ದ ಅಡಿಪಾಯ ತೆರವುಗೊಳಿಸುವ ವೇಳೆ ಉಪ್ಪಿನಂಗಡಿ ಅರಣ್ಯಾಧಿಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ. ನೀಡಿದ ದೂರಿನ ಅನ್ವಯ ಶಾಸಕ ಹರೀಶ್ ಪೂಂಜಾ ವಿರುದ್ಧ ಐಪಿಸಿ 1860(U/s -143,353,504,149) ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಸರ್ವೇ ನಂಬ್ರ 309ರಲ್ಲಿ ಲೋಲಾಕ್ಷ ಗೌಡ ಎಂಬವರು ಮೀಸಲು ಅರಣ್ಯ ಪ್ರದೇಶವನ್ನು ಅತಿಕ್ರಮಣ ಮಾಡಿ ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸೂಚನೆಯಂತೆ ಅ.9ರಂದು ಬೆಳಗ್ಗೆ ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದ್ದೆ. ಈ ವೇಳೆ ಲೋಲಾಕ್ಷ ಗೌಡ ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಿಸಲು ಫೌಂಡೇಶನ್ ಹಾಕಿರುವುದು ಕಂಡುಬಂದಿತ್ತು. ಕೂಡಲೇ ನಿವೇಶನವನ್ನು ತೆರವು ಮಾಡುವಂತೆ ಲೋಲಾಕ್ಷ ಗೌಡರಿಗೆ ಸೂಚಿಸಿದೆವು. ಆದರೆ ಅವರು ತೆರವುಗೊಳಿಸದ ಕಾರಣ ಮನೆ ಫೌಂಡೇಶನನ್ನು ಅರಣ್ಯ ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿ ಮುಖಾಂತರ ತೆರವುಗೊಳಿಸಲು ಮುಂದಾದೆವು. ಆ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ, ಅದನ್ನು ತಡೆದರು. ಅಲ್ಲದೆ ಅಧಿಕಾರಿಗಳ ಸಮ್ಮುಖದಲ್ಲಿ ಉಪ್ಪಿನಂಗಡಿ ಅರಣ್ಯಾಧಿಕಾರಿಯಾಗಿರುವ ತನ್ನನ್ನು ಅವಾಚ್ಯ ಪದ ಬಳಸಿ ನಿಂದಿಸಿದ್ದಲ್ಲದೆ, ನಿವೇಶನವನ್ನು ತೆರವುಗೊಳಿಸಿದ್ದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದರು. ಆದುದರಿಂದ ಅರಣ್ಯ ಇಲಾಖಾ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಉಪ್ಪಿನಂಗಡಿ ಅರಣ್ಯಾಧಿಕಾರಿಯಾಗಿರುವ ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತು ಅವರ ಬೆಂಬಲಿಗರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ. ಅ.13ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಒತ್ತಾಯಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply