LATEST NEWS
ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದ ಮಾಜಿ ಕಾರ್ಪೊರೇಟರ್ ಶ್ವೇತಾ ಪೂಜಾರಿ ವಿರುದ್ಧ FIR

ಮಂಗಳೂರು ಮೇ 18: ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಿಸಿ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ಮಾಜಿ ಕಾರ್ಪೋರೇಟರ್ ಶ್ವೇತಾ ಪೂಜಾರಿ ಎಂಬ ಮಹಿಳೆಯ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಶ್ವೇತಾ ಪೂಜಾರಿ ತನ್ನ ಫೇಸ್ಟುಕ್ ಖಾತೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಘಟನೆ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಬುರ್ಖಾಧಾರಿ ಮಹಿಳೆಯರನ್ನು ನಮಗೆ ತಂದೊಪ್ಪಿಸಿ, ಅವರನ್ನು ಯುವಮೋರ್ಚಾದ ಮಹಿಳೆಯರು ನೋಡಿಕೊಳ್ಳುತ್ತೇವೆಂದು ಪ್ರಚೋದನಕಾರಿ ಪೋಸ್ಟ್ ಮಾಡಿದ್ದರು. ಇದಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫೋಟೋ ತೋರಿಸಿ ಗೂಂಡಾ ಮುಂತಾದ ಅವಾಚ್ಯ ಪದಗಳಿಂದ ನಿಂದಿಸಿ ಪೋಸ್ಟ್ ಮಾಡಿದ್ದು ಈ ಬಗ್ಗೆ ಸುರತ್ಕಲ್ ಕ್ಷೇತ್ರದ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಶಾಂತಾ ರಾವ್ ಎಂಬವರು ಸುರತ್ಕಲ್ ಠಾಣೆಗೆ ದೂರು ನೀಡಿದ್ದರು. ಇದರಂತೆ, ಸುರತ್ಕಲ್ ಠಾಣೆಯಲ್ಲಿ ಶ್ವೇತಾ ಪೂಜಾರಿ ವಿರುದ್ಧ ಎಫ್‌ಐಆರ್ ದಾಖಲಾಗದೆ.

ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಾಗಿದ್ದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಇದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದುತ್ವದ ಪರ ಹೋರಾಟ ಮಾಡುವವರನ್ನು ದಮನಿಸುವ ಹೀನ ಕೆಲಸಕ್ಕೆ ಕಾಂಗ್ರೆಸ್ ಕೈ ಹಾಕಿದೆ. ಈ ಮೂಲಕ ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆ ತರಲಾಗುತ್ತಿದೆ ಎಂದು ಆರೋಪಿಸಲಾಗಿದೆ.