DAKSHINA KANNADA
ಬಿಲ್ಲವ ಸಮಾಜದ ಹೆಣ್ಣು ಮಕ್ಕಳ ಮೇಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ದ ಎಫ್ಐಆರ್
ಪುತ್ತೂರು ಅಕ್ಟೋಬರ್ 17: ಬಿಲ್ಲವ ಸಮಾಜದ 1ಲಕ್ಷ ಹೆಣ್ಣು ಮಕ್ಕಳು ವೇಶ್ಯೆಯರು ಎಂದು ಪೊನ್ ಸಂಭಾಷಣೆ ವೇಳೆ ನಾಲಿಗೆ ಹರಿಯಬಿಟ್ಟಿದ್ದ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪಂಜ ಉಪವಲಯ ಅರಣ್ಯಾಧಿಕಾರಿಯಾಗಿರುವ ಸಂಜೀವ ಪೂಜಾರಿ ಕಾಣಿಯೂರು ಸುರೇಶ್ ಕಾಸರಗೋಡು ಎಂಬ ಹಿಂದೂ ಕಾರ್ಯಕರ್ತನ ಜೊತೆ ದೂರವಾಣಿ ಸಂಭಾಷಣೆ ವೇಳೆ ಬಿಲ್ಲವ ಸಮಾಜದ ಹೆಣ್ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1 ಲಕ್ಷ ಬಿಲ್ಲವ ಹುಡುಗಿಯರು ಸೂಳೆಯಾಗಿದ್ದಾರೆ’ ‘ಇದಕ್ಕೆ ನನ್ನ ಬಳಿ 10,000 ದಾಖಲೆ ಕೂಡ ಇದೆ, ಹಿಂದುತ್ವದ ಹುಡುಗರು ಸೂಳೆಯರನ್ನಾಗಿ ಮಾಡಿದ್ದಾರೆ’ ‘ಬಿಲ್ಲವ ಸಮಾಜದ 1ಲಕ್ಷ ಹುಡುಗಿಯರು ವೇಶ್ಯೆಯಾಗಲು ಹಿಂದೂ ಸಂಘಟನೆಯ ಯುವಕರು ಕಾರಣ’ ‘ಭಜನೆ ಮಾಡಿದ ಹಿಂದು ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದು ಹುಡುಗರು’ ಎಂದು ದೂರವಾಣಿಯಲ್ಲಿ ಹಿಂದೂ ಹೆಣ್ಣುಮಕ್ಕಳ ಬಗ್ಗೆ ತೀರ ಅವಹೇಳನಕಾರಿ ಹೇಳಿಕೆ ನೀಡಿದ್ದರು.
ಈ ವಿಡಿಯೋ ಭಾರೀ ವೈರಲ್ ಆಗಿದ್ದು, ಅಧಿಕಾರಿ ವಿರುದ್ದ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದೂರು ದಾಖಲಾಗಿತ್ತು. ಆದರೆ ಪೊಲೀಸರು ಮಾತ್ರ ಎಫ್ಐಆರ್ ಮಾಡದೇ ಸೈಲೆಂಟ್ ಆಗಿದ್ದರು. ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಎಫ್ ಐಆರ್ ಮಾಡದ ಹಿನ್ನಲೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನಾಳೆ ಪ್ರತಿಭಟನೆಗೆ ಕರೆ ನೀಡಿದ್ದರು. ಇದೀಗ ಹಿಂಜಾವೇ ಪ್ರತಿಭಟನೆ ಎಚ್ಚರಿಕೆ ಬೆನ್ನಲ್ಲೇ ಬೆಳ್ಳಾರೆ ಪೊಲೀಸರಿಂದ ಸಂಜೀವ ಪೂಜಾರಿ ಕಾಣಿಯೂರು ವಿರುದ್ದ ಬಿಎನ್ಎಸ್ 79 ಸೆಕ್ಷನ್ ನಡಿ ಪ್ರಕರಣ ದಾಖಲಿಸಿದ್ದಾರೆ.