KARNATAKA
ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಪ್ರಧಾನಿ ಮೋದಿ ಎಂದ ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ಬಿತ್ತು ಎಫ್ಐಆರ್
ಶ್ರೀರಂಗಪಟ್ಟಣ ಡಿಸೆಂಬರ್ 26 : ಮಂಡ್ಯದಲ್ಲಿ ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಭಾಷಣದ ವೇಳೆ ಮುಸ್ಲಿಂ ಹೆಂಗಸರಿಗೆ ಪರ್ಮೆನೆಂಟ್ ಗಂಡ ಕೊಟ್ಟಿದ್ದು ಮೋದಿ ಸರ್ಕಾರ ಎಂದು ಹೇಳಿಕೆ ನೀಡಿದ್ದ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ವಿರುದ್ದ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಯುವ ಚಿಂತಕಿ ನಜ್ಮಾ ನಜೀರ್ ಅವರು ನಮ್ಮ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಕೀಳು ಮಟ್ಟದ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಿದ್ದರು. ಈ ಕೇಸ್ ಆದರಿಸಿ FIR ದಾಖಲಾಗಿದೆ. ಸೆಕ್ಷನ್ 354, 294, 509, 506, 153(2), 295, 295 (5), 298 04 ರೀತಾ ಪ್ರಕರಣ ದಾಖಲಿಸಲಾಗಿದೆ. ನಜ್ಮಾ ಅವರು ದಾಖಲಿಸಿರುವ ಪ್ರಕರಣದಲ್ಲಿ, ರವಿವಾರ ದಿನಾಂಕ 24.12.2023 ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿರುವ ಕಲ್ಲಡ್ಕ ಪ್ರಭಾಕರ ಭಟ್ “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ಮುಸ್ಲಿಂ ಯುವಕರು ಮಾತ್ರ ಅಲ್ಲ. ಮುಸ್ಲಿಂ ಯುವತಿಯರು ಮೋಸ ಮಾಡುತ್ತಿದ್ದಾರೆ. ಹಿಂದೂ ಯುವಕ ಯುವತಿಯರನ್ನ ಲವ್ ಜಿಹಾದ್ ಮಾಡುತ್ತಿದ್ದಾರೆ. ನಿಮ್ಮಲ್ಲಿ ಯುವತಿ ಯುವಕರು ಇಲ್ಲವೇ?” ಎಂದು ಹೇಳಿಕೆ ನೀಡಿದ್ದರು, ಈ ಹಿನ್ನಲೆ ಅವರ ಮೇಲೆ ಕ್ರಮಕೈಗೊಳ್ಳಬೇಕೆಂದು ಪೊಲೀಸರಿಗೆ ದೂರು ನೀಡಿದ್ದರು.
ಇದೀಗ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಜಾಮೀನು ರಹಿತ ಸೆಕ್ಷನ್ ಗಳಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಇತರರ ವಿರುದ್ದ ಐಪಿಸಿ ಸೆಕ್ಷನ್ 354, 294, 509, 506, 153A, 295, 295A, 298 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.