BELTHANGADI
ಠಾಣೆ ಏನು ನಿಮ್ಮ ಅಪ್ಪನದಾ…ನಮ್ಮ ಸರ್ಕಾರ ಬರುತ್ತದಲ್ಲಾ ಆವಾಗ ನಿಮ್ಮನ್ನು ನೋಡುತ್ತೇನೆ ಎಂದ ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್ಐಆರ್
ಬೆಳ್ತಂಗಡಿ ಮೇ 20 : ಅಕ್ರಮ ಗಣಿಗಾರಿಕೆ ಹಾಗೂ ಸ್ಪೋಟಕಗಳ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಅರೆಸ್ಟ್ ಆಗಿರುವ ತಮ್ಮ ಆಪ್ತ, ಬಿಜೆಪಿ ಮುಖಂಡನ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿಗೆ ಅವಾಚ್ಯವಾಗಿ ಬೈದು, ಬೆದರಿಕೆ ಒಡ್ಡಿದ ಆರೋಪದ ಮೇಲೆ ಶಾಸಕ ಹರೀಶ್ ಪೂಂಜ ವಿರುದ್ಧ ಭಾನುವಾರ ಎಫ್‌ಐಆರ್ ದಾಖಲಾಗಿದೆ.
ಹರೀಶ್ ಪೂಂಜ ಅವರು ಆರೋಪಿಯನ್ನು ಬಿಡುಗಡೆ ಮಾಡುವಂತೆ ಠಾಣಾಧಿಕಾರಿಗಳಿಗೆ ಒತ್ತಡ ಹಾಕಿ, ಅವ್ಯಾಚವಾಗಿ ಬೈದು ಬೆದರಿಸಿದ್ದಾರೆ. ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ಇಲಾಖೆಯ ಬಗ್ಗೆ ಮತ್ತು ಪೊಲೀಸ್ ಅಧಿಕಾರಿಗಳ ಬಗ್ಗೆ ಅಸಾಂವಿಧಾನಿಕ ಶಬ್ದಗಳಲ್ಲಿ ಮಾತನಾಡಿ, ದುರ್ವರ್ತನೆ ತೋರಿದ್ದಾರೆ’ ಎಂದು ಪೊಲೀಸರು ಆರೋಪಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 353 (ಅಧಿಕಾರಿ ಮೇಲೆ ಹಲ್ಲೆ ಅಥವಾ ಕರ್ತವ್ಯಕ್ಕೆ ಅಡ್ಡಿಪಡಿಸುವಿಕೆ) ಮತ್ತು ಸೆಕ್ಷನ್ 504ರ (ಉದ್ದೇಶ ಪೂರ್ವಕವಾಗಿ ಅವಮಾನಗೊಳಿಸುವುದು ಮತ್ತು ಸಾರ್ವಜನಿಕ ಶಾಂತಿ ಕದಡಲು ಪ್ರಚೋದಿಸುವುದು) ಅಡಿ ಪ್ರಕರಣ ದಾಖಲಿಸಿದ್ದಾರೆ.