Connect with us

    LATEST NEWS

    ಮಂಗಳೂರು: ಮೂಡಾ ಆಯುಕ್ತರ ಮೇಲೆ ಲೈಂಗಿಕ ಕಿರುಕುಳದ ಆರೋಪ : ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಸಂತ್ರಸ್ಥೆ..!

    ಮಂಗಳೂರು ಜನವರಿ 07 : ಕಚೇರಿಯಲ್ಲಿ ಕೆಲಸ ನಿರ್ವಹಿಸುವ ಹೊರಗುತ್ತಿಗೆ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಅಲಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
    ಈ ಕುರಿತು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ಅವರಿಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದು ಉರ್ವ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.


    ಮುಡಾ ಆಯುಕ್ತರಾದ ಮನ್ಸೂರು ಆಲಿ ಲೈಂಗಿಕ, ಮಾನಸಿಕ, ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪ್ರಾಧಿಕಾರದ ಮಹಿಳಾ ಸಿಬ್ಬಂದಿಯೊಬ್ಬರು ಶುಕ್ರವಾರ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 354ರ (ಮಹಿಳೆಯ ಮೇಲೆ ಹಲ್ಲೆ ಮತ್ತು ಮಾನಭಂಗ ಯತ್ನ) ಹಾಗೂ 354 ಎ(ಲೈಂಗಿಕ ಕಿರುಕುಳ) ಅಡಿ ಉರ್ವಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಈ ಪ್ರಕರಣದ ತನಿಖೆ ನಡೆಯುತ್ತಿದೆ’ ಎಂದು ಪೊಲೀಸ್‌ ಅನುಪಮ್‌ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply