LATEST NEWS
ಮಂಗಳೂರು – ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ದ ಎಫ್ಐಆರ್
ಮಂಗಳೂರು ಮೇ 28: ಕಂಕನಾಡಿಯ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಇದೀಗ ರಸ್ತೆಯಲ್ಲಿ ನಮಾಜ್ ಮಾಡಿದವರ ಕದ್ರಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಮೇ 24 ರಂದು ಕಂಕನಾಡಿಯ ಮಸೀದಿ ಎದುರು ಕೆಲವು ಯುವಕರು ರಸ್ತೆಯನ್ನು ಬ್ಲಾಕ್ ಮಾಡಿ ನಮಾಜ್ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಲ್ಲದೆ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕಲಂ 341, 283, 143 ಜೊತೆಗೆ 149 ಐ.ಪಿ.ಸಿಯಂತೆ ಕದ್ರಿ ಪೊಲೀಸರು ಸುಮೊಟೊ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಅಪರಿಚಿತ ವ್ಯಕ್ತಿಗಳ ಮೇಲೆ ಮಂಗಳೂರಿನ ಕದ್ರಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.