Connect with us

    BANTWAL

    ಮನೆಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

    ಬಂಟ್ವಾಳ, ಮೇ 19: ತಾಲೂಕಿನ ಪಾಣೆಮಂಗಳೂರಿನ ಆಲಡ್ಕ ಮಸೀದಿ ಸಮೀಪದ ವಸತಿ ಸಂಕೀರ್ಣದ ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.

    ವಸತಿ ಸಂಕೀರ್ಣದಲ್ಲಿದ್ದ ಉದ್ಯಮಿ ಹನೀಫ್ ಹಾಸ್ಕೋ ಎಂಬುವರ ಕುಟುಂಬ ಸಂಬಂಧಿರೊಬ್ಬರ ಅಂತ್ಯಕ್ರಿಯೆಗೆ ತೆರಳಿತ್ತು. ಈ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ 50 ಸಾವಿರ ನಗದು, 20 ಪವನ್ ಚಿನ್ನಾಭರಣ, ಪಿಠೋಪಕರಣಗಳು ಸೇರಿದಂತೆ ಅನೇಕ ವಸ್ತುಗಳು ಸುಟ್ಟು ಭಸ್ಮವಾಗಿವೆ.

    ಕೂಡಲೇ ಸ್ಥಳಕ್ಕೆ ತೆರಳಿದ ಬಂಟ್ವಾಳ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯುತ್​ ಶಾರ್ಟ್​ ಸರ್ಕ್ಯೂಟ್​ನಿಂದ ಈ ಬೆಂಕಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply