LATEST NEWS
ಬ್ಯಾಂಕ್ ಆಫ್ ಬರೋಡಾ ಹಂಪನಕಟ್ಟೆ ಶಾಖೆಯಲ್ಲಿ ಅಗ್ನಿ ಅವಘಡ

ಮಂಗಳೂರು ಸೆಪ್ಟೆಂಬರ್ 30 : ಮಂಗಳೂರಿನ ಹಂಪನಕಟ್ಟೆದಲ್ಲಿರುವ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕದಳ ಸಿಬ್ಬಂದಿಗಳು ತಕ್ಷಣ ಬೆಂಕಿ ನಂದಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಈ ಅಗ್ನಿ ಅನಾಹುತದಿಂದಾಗಿ ಕಚೇರಿಯಲ್ಲಿದ್ದ ಹಲವು ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಹೋಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಕಿ ಅವಘಡದಿಂದಾಗಿ ಐದು ಹವಾನಿಯಂತ್ರಣಗಳು ಮತ್ತು ಕಂಪ್ಯೂಟರ್‌ಗಳು ಸುಟ್ಟು ಹೋಗಿವೆ ಎಂದು ತಿಳಿದು ಬಂದಿದೆ
