Connect with us

    LATEST NEWS

    ದೇರಳಕಟ್ಟೆ ಬಿಎಸ್ಸೆನ್ನೆಲ್ ಕಚೇರಿಗೆ ಬೆಂಕಿ

    ದೇರಳಕಟ್ಟೆ ಬಿಎಸ್ಸೆನ್ನೆಲ್ ಕಚೇರಿಗೆ ಬೆಂಕಿ

    ಮಂಗಳೂರು, ಜೂನ್ 2: ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿ ಬಿಎಸ್ಸೆನ್ನೆಲ್ ಟೆಲಿಕಾಂ ಎಕ್ಸ್ ಚೇಂಜ್ ಕಚೇರಿಯಲ್ಲಿ ಹಠಾತ್ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ.‌

    ಬೆಳಗ್ಗೆ ಹತ್ತು ಗಂಟೆ ವೇಳೆಗೆ ಬಾಗಿಲು ತೆರೆದಾಗ ಕಚೇರಿಯಲ್ಲಿ ಹೊಗೆ ತುಂಬಿಕೊಂಡಿತ್ತು. ಬಳಿಕ ಅಗ್ನಿಶಾಮಕ ದಳಕ್ಕೆ ವಿಷಯ ಮುಟ್ಟಿಸಿದರು. ಉಳ್ಳಾಲ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಕಾಲಿಕ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.

    ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ಬೆಂಕಿ ಹತ್ತಿಕೊಂಡಿರುವ ಬಗ್ಗೆ ಸ್ಥಳೀಯರು ತಿಳಿಸಿದ್ದಾರೆ. ‌ಕಚೇರಿಗೆ ಸಂಬಂಧಪಟ್ಟ ಹಲವು ಉಪಕರಣಗಳು ಬೆಂಕಿಗೆ ಆಹುತಿಯಾಗಿದ್ದವು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply