LATEST NEWS
ಕಲ್ಲಾಪು ಗ್ಲೋಬಲ್ ಮಾರ್ಕೆಟ್ ನಲ್ಲಿ ಬೆಂಕಿ ಅವಘಡ – ಬೆಂಕಿಗೆ ಹೊತ್ತಿ ಉರಿದ ಅಂಗಡಿಗಳು

ಮಂಗಳೂರು ಜೂನ್ 10: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಉಳ್ಳಾಲದ ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕೆಟ್ ನಲ್ಲಿ ನಡೆದಿದೆ. ಸೋಮವಾರ ಮುಂಜಾನೆ 4 ಗಂಟೆ ವೇಳೆಗೆ ನಡದಿರುವ ಬಗ್ಗೆ ವರದಿಯಾಗಿದೆ.
ಮಾರುಕಟ್ಟೆ ಮೇಲೆ ಹಾಕಲಾಗಿದ್ದ ಶೀಟು, ಅಂಗಡಿಗಳಲ್ಲಿ ಆಹಾರ ಸಾಮಗ್ರಿ ಶೇಖರಣೆ ಮಾಡಿಕೊಡುವ ಕಪಾಟು, ಟೇಬಲ್ ಫ್ರೂಟ್ಸ್, ನಗದು ಸಹಿತ ಇತರ ಸಾಮಾಗ್ರಿಗಳು ಬೆಂಕಿಗಾಹುತಿಯಾಗಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ :ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನದ ವಿಜಯೋತ್ಸವ ಮುಗಿಸಿ ಬೋಳಿಯಾರು ಪೇಟೆಯಲ್ಲಿ ನಿಂತಿದ್ದ ಯುವಕರಿಗೆ ಚೂರಿ ಇರಿತ