LATEST NEWS
ದೀಪಾವಳಿ ಪೂಜೆ ವೇಳೆ ಅಗ್ನಿ ಅವಘಡ, ಗಂಗೊಳ್ಳಿಯಲ್ಲಿ 7 ಮೀನುಗಾರಿಕಾ ದೋಣಿಗಳು ಬೆಂಕಿಗಾಹುತಿ..!

ಉಡುಪಿ, ನವೆಂಬರ್ 13: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಬಂದರಿನಲ್ಲಿ ದೀಪಾವಳಿ ಪ್ರಯುಕ್ತ ಪೂಜೆ ನಡೆಯುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿದೆ.
ಈ ದುರ್ಘಟನೆಯಲ್ಲಿ ಏಳು ಮೀನುಗಾರಿಕಾ ದೋಣಿಗಳು ಬೆಂಕಿಗಾಹುತಿಯಾಗಿದ್ದು ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಚರಣೆ ನಡೆಸಿದೆ. ಪಟಾಕಿ ಸಿಡಿದು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದ್ದರೂ ನಿಖರ ಕಾರಣ ತಿಳಿದುಬಂದಿಲ್ಲ.

Continue Reading