DAKSHINA KANNADA
ಬೈಕಂಪಾಡಿಯ ಫರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ

ಮಂಗಳೂರು, ಜನವರಿ 09: ನಗರದ ಬೈಕಂಪಾಡಿ ಬಳಿಯ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್ ನ ಫರ್ಫ್ಯೂಮ್ ಫ್ಯಾಕ್ಟರಿಯಲ್ಲಿ ನಿನ್ನೆ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಡೆದಿದೆ.
ತಡರಾತ್ರಿ ಸುಮರು 1 ಘಂಟೆ ಸುಮಾರಿಗೆ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್ ನ ಸುಗಂಧ ತಯಾರಿಕಾ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿದ್ದು ಇದನ್ನು ಗಮನಿಸಿದ ಸ್ಥಳೀಯರು ಹಾಗು ಸಂಸ್ಥೆಯ ಸೆಕ್ಯೂರಿಟಿ ಅಗ್ನಿಶಾಮಕ ದಳ ಕರೆ ಮಾಡಿದ್ದಾರೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ಪಾಂಡೇಶ್ವರ, ಕದ್ರಿ, ಮತ್ತು ಎಮ್ ಆರ್ ಪಿ ಎಲ್ ನ ಅಗ್ನಿಶಾಮಕ ಸಿಬ್ಬಂದಿಗಳು ಹರ ಸಾಹಸ ಪಡಬೇಕಾಯಿತು. ಬಾರಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಆವರಿಸಿದ್ದರಿಂದ ಸುಮಾರು ಮೂರು ಘಂಟೆಗಳ ಕಾಲ ಸತತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. ಅಗ್ನಿ ದುರಂತಕ್ಕೆ ಸ್ಪಷ್ಟ ಕಾರಣಗಳು ತಿಳಿದು ಬಂದಿಲ್ಲ. ಪಣಂಬೂರು ಪೊಲೀಸ್ ಠಾಣಾಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.