Connect with us

    LATEST NEWS

    ಅತ್ತಾವರ – ಅಪಾರ್ಟ್ಮೆಂಟ್ ನಲ್ಲಿ ಆಕಸ್ಮಿಕ ಬೆಂಕಿಗೆ ಮಹಿಳೆ ಬಲಿ

    ಮಂಗಳೂರು ನವೆಂಬರ್ 28 : ಅತ್ತಾವರ ಸಮೀಪದ ಅಪಾರ್ಟ್ ಮೆಂಟ್ ನ ಪ್ಲ್ಯಾಟ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಅವಘಡ ಸಂಭವಿಸಿದ್ದು,ಈ ಘಟನೆಯಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ. ಮೃತರನ್ನು ಶಾಹಿನಾ ನುಸ್ಬಾ ಎಂದು ಗುರುತಿಸಲಾಗಿದೆ ಗುರುತಿಸಲಾಗಿದೆ.


    ನಗರದ ಅತ್ತಾವರದ ಐವರಿ ಟವರ್ ಎಂಬ ಅಪಾರ್ಟ್ಮೆಂಟ್ ನ ಫ್ಲ್ಯಾಟ್ ವೊಂದರಲ್ಲಿ ಇಂದು ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಅಪಾರ್ಟ್ಮೆಂಟ್ ಬೆಂಕಿ ತಗುಲುವ ವೇಳೆ ಮಹಿಳೆ  ಶಾಹಿನಾ ನುಸ್ಬಾ ಅವರು ಅನಾರೋಗ್ಯದಿಂದಾಗಿ ಬೆಡ್ ರೂಂ ನಲ್ಲಿಯೇ ಇದ್ದರು ಎಂದು ತಿಳಿದು ಬಂದಿದ್ದು, ಅವರು ಬೆಂಕಿಯ ಹೊಗೆಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮನೆಯೊಳಗಿದ್ದ ಮತ್ತೊಬ್ಬರು ತೀವ್ರ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ತಗುಲುವ ಸಂದರ್ಭದಲ್ಲಿ ಮನೆಯಲ್ಲಿ ಒಂಭತ್ತು ಮಂದಿ ಇದ್ದರು. ಬೆಂಕಿ ತಗುಲುವ ವೇಳೆ ಅದರಲ್ಲಿ ಏಳು ಮಂದಿ ಹೊರಬಂದಿದ್ದಾರೆ. ನಂತರ ಇಬ್ಬರು ಒಳಗೆ ಇರುವುದು ತಿಳಿದಿದೆ. ಆದರೆ ಅವರನ್ನು ರಕ್ಷಿಸುವ ವೇಳೆ ಒಬ್ಬರು ಸಾವನ್ನಪ್ಪಿದ್ದು ಮತ್ತೊಬ್ಬರು ತೀವ್ರ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.


    ಅಗ್ನಿ ಅವಘಡದ ಮಾಹಿತಿ ಪಡೆದ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿಗಳು ಮಾಹಿತಿ ‌ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply