BANTWAL
ಬಂಟ್ವಾಳ – ಆಕಸ್ಮಿಕ ಬೆಂಕಿಗೆ ಇಲೆಕ್ಟ್ರಾನಿಕ್ ಅಂಗಡಿ ಸುಟ್ಟು ಭಸ್ಮ

ಬಂಟ್ವಾಳ ಸೆಪ್ಟೆಂಬರ್ 19 : ಆಕಸ್ಮಿಕವಾಗಿ ಬೆಂಕಿ ತಗುಲಿ ಇಲೆಕ್ಟ್ರಾನಿಕ್ ಅಂಗಡಿಯೊಂದು ಭಾಗಶ: ಬೆಂಕಿಗಾಹುತಿಯಾದ ಘಟನೆ ಇಂದು ಮಧ್ಯಾಹ್ನ ವೇಳೆ ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.
ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿರುವ ಪುರಸಭಾ ವಾಣಿಜ್ಯ ಮಳಿಗೆಯೊಂದರಲ್ಲಿ ಅಗ್ನಿ ಆಕಸ್ಮಿಕ ಮಂಗಳವಾರ ಸಂಭವಿಸಿದ್ದು, ಹಲವು ಸೊತ್ತುಗಳು ಸುಟ್ಟುಹೋಗಿವೆ ಎಂದು ಹೇಳಲಾಗಿದೆ. ಬಳಿಕ ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಬೆಂಕಿ ನಂದಿಸುವಲ್ಲಿ ಸಫಲರಾದರು.

ಅಂಗಡಿಯಲ್ಲಿದ್ದ ಸುಮಾರು ಲಕ್ಷಾಂತರ ರೂ.ಬೆಲೆಬಾಳುವ ಟಿ.ವಿ.ಸಹಿತ ಅನೇಕ ಗೃಹೋಪಯೋಗಿ ಉಪಕರಣಗಳನ್ನು ಸುಟ್ಟು ಹೋಗಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.