Connect with us

    BANTWAL

    ಬಂಟ್ವಾಳ – ಪ್ರಿಯಾ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಬೆಂಕಿ ಅನಾಹುತ

    ಬಂಟ್ವಾಳ ಫೆಬ್ರವರಿ 02: ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಬಂಟ್ವಾಳ ಬಿಸಿರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಇರುವ ಪ್ರಿಯಾ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ನಡೆದಿದೆ.


    ಪ್ರೀತಂ ಎಂಬವರಿಗೆ ಸೇರಿದ ಪ್ರಿಯಾ ಎಲೆಕ್ಟ್ರಾನಿಕ್ಸ್ ಮಳಿಗೆಯ ಮೇಲಿನ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ‌.ಎಲೆಕ್ಟ್ರಾನಿಕ್ಸ್ ಜೊತೆಗೆ ಕೊಮಾಕಿ ಕಂಪೆನಿಗೆ ಸೇರಿದ ದ್ವಿಚಕ್ರವಾಹನಗಳ ದಾಸ್ತಾನು ಇರಿಸಲಾಗಿರುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕೊಮಾಕಿ ಕಂಪೆನಿಯ ಬ್ಯಾಟರಿ ಚಾಲಿತ ಸ್ಕೂಟರ್ ಗಳು ಇಲ್ಲಿದ್ದು, ಇದರ ಬ್ಯಾಟರಿ ಸ್ಪೋಟಗೊಂಡು ಬೆಂಕಿ ಹಚ್ಚಿಕೊಂಡಿದೆಯಾ ಎಂಬ ಸಂಶಯ ವ್ಯಕ್ತವಾಗಿದೆ. ಸಾರ್ವಜನಿಕರು ಬೆಂಕಿಯನ್ನು ನೋಡಿ ಅಗ್ನಿಶಾಮಕ ದಳದ ವರಿಗೆ ಸಂಪರ್ಕ ಮಾಡಿದ್ದಾರೆ.
    ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡುತ್ತಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply