ಬೆಂಗಳೂರು,ಫೆಬ್ರವರಿ 25: ಶಾರ್ಟ್ ಸರ್ಕ್ಯೂಟ್ನಿಂದಾಗಿ ಫ್ಯಾನ್ಸಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರು ನಗರದ ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ.

ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಬಿಲ್ಡಿಂಗ್ ನಲ್ಲಿ ಇರುವ ಫ್ಯಾನ್ಸಿ ಸ್ಟೋರ್ನಲ್ಲಿ ಏಕಾ ಏಕಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಆರು ಅಗ್ನಿಶಾಮಕದಳ ವಾಹನಗಳು ಆಗಮಿಸಿದ್ದು, ದಟ್ಟ ಹೊಗೆ ಆವರಿಸಿಕೊಂಡ ಹಿನ್ನೆಲೆ ಆಕ್ಸಿಜನ್ ಸಿಲಿಂಡರ್, ಮಾಸ್ಕ್ ಧರಿಸಿ ಅಗ್ನಿಶಾಮಕ ಸಿಬ್ಬಂದಿ ಅಂಗಡಿ ಒಳಗೆ ಹೋಗಿ, ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ಕಳೆದ ಒಂದು ಗಂಟೆಯಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.