Connect with us

    LATEST NEWS

    ಬೆಂಗಳೂರಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಬೆಂಕಿ – ದೆಹಲಿಯಲ್ಲಿ ಹಾರಾಟ ರದ್ದು

    ನವದೆಹಲಿ, ಅಕ್ಟೋಬರ್ 29: ಬೆಂಗಳೂರಿಗೆ ಆಗಮಿಸಬೇಕಿದ್ದ ಇಂಡಿಗೋ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಹಿನ್ನೆಲೆ ದೆಹಲಿಯಲ್ಲಿ ವಿಮಾನ ಹಾರಾಟ ರದ್ದು ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

    ಶುಕ್ರವಾರ ರಾತ್ರಿ ಬೆಂಗಳೂರಿಗೆ ಆಗಮಿಸಬೇಕಿದ್ದ ಇಂಡಿಗೋ ವಿಮಾನ 6E 2131 ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

    ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋವೊಂದು ಕಾಣಿಸಿಕೊಂಡಿದೆ. ವೀಡಿಯೋದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಎಂಜಿನ್‌ನಲ್ಲಿ ದಟ್ಟವಾದ ಬೆಂಕಿಯ ಕಿಡಿ ಚಿಮ್ಮುತ್ತಿರುವುದು ಕಂಡುಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply