ಪೂರ್ಣಪ್ರಜ್ಞ ಕಾಲೇಜು ರಸ್ತೆಯಲ್ಲಿ ಬೆಂಕಿ ಅವಘಡ ಸಂಪರ್ಕ್ ಝೆರಾಕ್ಸ್ ನ ಎರಡು ಮಹಡಿಯೊಳಗಿದ್ದ ವಸ್ತುಗಳು ಸುಟ್ಟು ಕರಕಲು

ಉಡುಪಿ ಮೇ.23: ಉಡುಪಿ ನಗರದ ಪೂರ್ಣಪ್ರಜ್ಞ ಕಾಲೇಜು ಸಮೀಪ ಬೆಂಕಿ ಅವಘಡ ಸಂಭವಿಸಿದೆ. ಕಾಲೇಜಿನ ಮುಂಭಾಗದಲ್ಲಿರುವ ಸಂಪರ್ಕ ಜೆರಾಕ್ಸ್ ಅಂಗಡಿಯಲ್ಲಿ ಸಂಜೆ ಇದ್ದಕ್ಕಿದ್ದಂತೆ ಬೆಂಕಿಯ ಕೆನ್ನಾಲಗೆ ಎದ್ದಿದೆ. ಸಂಜೆ ಏಳು ಗಂಟೆ ಸುಮಾರಿಗೆ ಜೆರಾಕ್ಸ್ ಅಂಗಡಿಯನ್ನು ಬಂದ್ ಮಾಡಿ ಮಾಲೀಕರು ಮನೆಗೆ ಹೋಗಿದ್ದರು.ಈ ಸಂದರ್ಭ ಶಾರ್ಟ್ ಸರ್ಕ್ಯೂಟ್ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳದಲ್ಲಿದ್ದವರು ಕೂಡಲೇ ಪೊಲೀಸ್ ಠಾಣೆಗೆ ಮತ್ತು ಅಗ್ನಿಶಾಮಕ ಠಾಣೆಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕದಳ ಬಂದು ಬೆಂಕಿ ನಂದಿಸುವ ಕಾರ್ಯವನ್ನು ನಡೆಸಿದೆ ಮೇಲ್ನೋಟಕ್ಕೆ ಇದು ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿರಬಹುದು ಎನ್ನಲಾಗಿದೆ. ಜೆರಾಕ್ಸ್ ಅಂಗಡಿಯಲ್ಲಿರುವ ಮಶೀನ್ ಗಳು ಅಗಾಧ ಪ್ರಮಾಣದ ಖಾಲಿ ಪೇಪರ್ ಗಳು, ಕೆಲವು ಪ್ರಮುಖ ದಾಖಲೆಗಳು ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಕಾರ್ಯಾಚರಣೆಗೆ ಸ್ಥಳೀಯ ಯುವಕರು ಕೂಡ ಕೈಜೋಡಿಸಿದ್ದಾರೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.