Connect with us

    LATEST NEWS

    ಚಲಿಸುತ್ತಿದ್ದ ಕಾರಿಗೆ ಬೆಂಕಿ ಕಾರು ಸಂಪೂರ್ಣ ಭಸ್ಮ….!!

    ಮಂಗಳೂರು ಜೂನ್ 26:ಚಲಿಸುತ್ತಿದ್ದ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್‌ ಸಂಭವಿಸಿ ಕಾರು ಹೊತ್ತಿ ಉರಿದ ಘಟನೆ ಕಟೀಲು ಸಮೀಪದ ಎಕ್ಕಾರು ಅರಸುಲೆ ಪದವು ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

    ಕಾರು ಕಟೀಲು ಸಮೀಪದ ಅರಸುಲೆ ಪದವು ಎಂಬಲ್ಲಿನ ಜನವಸತಿ ಇಲ್ಲದ ಪ್ರದೇಶದಲ್ಲಿ ಸಂಚರಿಸುತ್ತಿದ್ದ ಸಂದರ್ಭ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ‌. ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರಿನಲ್ಲಿದ್ದವರು ಹೊರಗಡೆ ಬಂದಿರುವುದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


    ವಿಷಯ ತಿಳಿದು ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಕಾರು ಬೆಂಕಿಯ ಜ್ವಾಲೆಗೆ ಸಂಪೂರ್ಣವಾಗಿ ಆಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಬೆಂಕಿ ಅವಘಡ ಸಂಭವಿಸಿರಬಹುದು‌ ಎಂದು‌ ಶಂಕಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply