LATEST NEWS
ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ
ವಾಷಿಂಗ್ಟನ್ ಜುಲೈ 14: ಅಮೇರಿಕಾದ ಮಾಜಿ ಅಧ್ಯಕ್ಷ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದಿದೆ. ಪೆನ್ಸಿಲ್ವೇನಿಯಾದಲ್ಲಿ ಬಟ್ಲರ್‌ನಲ್ಲಿ ಹಮ್ಮಿಕೊಂಡಿದ್ದ ಹೊರಾಂಗಣ ರ‍್ಯಾಲಿಯನ್ನು ಉದ್ದೇಶಿಸಿ ಟ್ರಂಪ್ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಬಂದೂಕುಧಾರಿಗಳು ಗುಂಡು ಹಾರಿಸಿದ್ದರು. ಗುಂಡು ಟ್ರಂಪ್ ಅವರ ಕಿವಿಗೆ ತಾಗಿದ್ದು ಪ್ರಾಣಾಪಯದಿಂದ ಪಾರಾಗಿದ್ದಾರೆ.
ರ್ಯಾಲಿ ವೇಳೆ ಬೃಹತ್ ಜನ ಸೇರಿದ್ದ ಮುಂಭಾಗದ ವೇದಿಕೆಯಲ್ಲಿದ್ದ ಟ್ರಂಪ್ ಮೇಲೆ ಗುಂಡಿನ ದಾಳಿಯಾಗಿದ್ದು, ಮುಖ ಹಾಗೂ ಬಲಗಿವಿಯಲ್ಲಿ ರಕ್ತ ಕಾಣಿಸಿಕೊಂಡಿದೆ. ಘಟನೆ ನಡೆದ ಕೂಡಲೆ ಪ್ರತಿರೋಧ ವ್ಯಕ್ತಪಡಿಸಿದ ಟ್ರಂಪ್, ಕೈ ಎತ್ತಿ ಮುಷ್ಠಿ ಹಿಡಿದು ಸಾರ್ವಜನಿಕರತ್ತ ತಮ್ಮ ವಿರೋಧ ವ್ಯಕ್ತಪಡಿಸಿದರು.
ಬಳಿಕ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು ನಮ್ಮ ದೇಶದಲ್ಲಿ ಇಂತಹ ಕೃತ್ಯ ನಡೆದಿರುವುದನ್ನು ನಂಬಲಾಗುತ್ತಿಲ್ಲ. ಘಟನೆ ಬಳಿಕ ಅಮೆರಿಕಾ ಸೀಕ್ರೆಟ್ ಸರ್ವಿಸ್ ಹಾಗೂ ಕಾನೂನು ವ್ಯವಸ್ಥೆ ಕೈಗೊಂಡ ತ್ವರಿತ ಕ್ರಮಕ್ಕೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆಂದು ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. ಇನ್ನು ಈ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನಪ್ಪಿದ್ದಾರೆ.