Connect with us

    LATEST NEWS

    ಅಕ್ರಮ ಜಾನುವಾರ ಸಾಗಾಟಗಾರರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಪೈರಿಂಗ್

    ಅಕ್ರಮ ಜಾನುವಾರ ಸಾಗಾಟಗಾರರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಪೈರಿಂಗ್

    ಮಂಗಳೂರು ಅಗಸ್ಟ್ 5: ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದವರ ಮೇಲೆ ಅರಣ್ಯ ಸಿಬ್ಬಂದಿಗಳು ಫೈರಿಂಗ್ ಮಾಡಿರುವ ಘಟನೆ ನಡೆದಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಆಲೆಟ್ಟಿಯಲ್ಲಿ ಈ ಘಟನೆ ನಡೆದಿದ್ದು. ಕರ್ನಾಟಕದಿಂದ ಕೇರಳಕ್ಕೆ ಗೋವು ಸಾಗಿಸುತ್ತಿದ್ದ ಸಂದರ್ಭದಲ್ಲಿ ಗಡಿಭಾಗದಲ್ಲಿ ವಾಹನವನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ತಡೆದಿದ್ದಾರೆ. ಈ ಸಂದರ್ಭದಲ್ಲಿ ಪರಾರಿಯಾಗಲು ಯತ್ನಿಸಿದ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಫೈರಿಂಗ್ ಮಾಡಿದ್ದಾರೆ. ಗಾಡಿಯಲ್ಲಿ ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದಾರೆ ಎಂದು ತಪ್ಪಾಗಿ ತಿಳಿದುಕೊಂಡ ಅರಣ್ಯ ಇಲಾಖೆ ಸಿಬ್ಬಂದಿಗಳು ಪೈರಿಂಗ್ ಮಾಡಿದ್ದಾರೆ.

    ಅರಣ್ಯ ಇಲಾಖೆಯ ಸಿಬ್ಬಂದಿಗಳ ಗುಂಡಿನ ದಾಳಿ ಗಾಯಗೊಂಡು ಪರಾರಿಯಾಗಿದ್ದ ವ್ಯಕ್ತಿ ಕೇರಳದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕೇರಳ ಪೊಲೀಸರು ದಕ್ಷಿಣ ಕನ್ನಡ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಇತ್ತೀಚೆಗೆ ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಮರಗಳ್ಳರು ಅರಣ್ಯ ಇಲಾಖೆಯ ಸಿಬ್ಬಂದಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *