LATEST NEWS
ಫಾಝಿಲ್ ಹತ್ಯೆ ಪ್ರಕರಣ – ಹತ್ಯೆಗೆ ಬಳಸಿದ್ದ ಕಾರಿನ ಚಾಲಕ ಪೊಲೀಸ್ ವಶಕ್ಕೆ

ಮಂಗಳೂರು ಜುಲೈ 31: ಸುರತ್ಕಲ್‍ನ ಫಾಜಿಲ್ ಹತ್ಯೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತನನ್ನು ಅಜಿತ್ ಎಂದು ಗುರುತಿಸಲಾಗಿದ್ದು, ಈತ ಹತ್ಯೆ ಬಳಿಕ ಆರೋಪಿಗಳನ್ನು ಕಾರ್‌ನಲ್ಲಿ ಕರೆದೊಯ್ದಿದ್ದ. ಕಾರ್ ಚಾಲಕನಾಗಿದ್ದ ಕಾರಣಕ್ಕೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಗುರುವಾರ ರಾತ್ರಿ ಸುರತ್ಕಲ್ ನಲ್ಲಿ ಮಂಗಳಪೇಟೆ ನಿವಾಸಿ ಪಾಝಿಲ್ ಮೇಲೆ ದುಷ್ಕರ್ಮಿಗಳು ತಲವಾರ್ ದಾಳಿ ನಡೆಸಿ ಕೊಲೆ ಮಾಡಿದ್ದರು, ಇದೀಗ ಕೊಲೆಗೆ ಬಳಿಸಿದ್ದ ಕಾರನ್ನು ಪೊಲೀಸರು ಪತ್ತೆ ಹಚ್ಚಿದ್ದು, ಕಾರಿನ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
