LATEST NEWS
ಕರ್ನಾಟಕದಲ್ಲಿ ಹೆಚ್3ಎನ್2 ವೈರಸ್ ಗೆ ಮೊದಲ ಬಲಿ
ಬೆಂಗಳೂರು ಮಾರ್ಚ್ 10: ಕರ್ನಾಟಕದಲ್ಲಿ ಹೆಚ್3ಎನ್2 ವೈರಸ್ಗೆ ಮೊದಲ ಬಲಿಯಾಗಿದೆ. H3N2 ವೈರಸ್ನಿಂದ ಬಳಲುತ್ತಿದ್ದ ಹಾಸನ ಮೂಲದ ವೃದ್ಧ ಮೃತಪಟ್ಟಿದ್ದಾರೆ.
ಜ್ವರ, ಚಳಿ, ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದ 85 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಈಗಾಗಲೇ ರಾಜ್ಯದ ಜಿಲ್ಲೆಗಳಲ್ಲಿ ಹೆಚ್3ಎನ್2 ವೈರಸ್ ಹೆಚ್ಚಾಗಿದೆ. ರಾಜ್ಯದಲ್ಲಿ ಸುಮಾರು 50ಕ್ಕೂ ಹೆಚ್ಚು ಕೇಸ್ ಗಳು ದಾಖಲಾಗಿದ್ದು, ಹಾಸನದಲ್ಲಿ ಆರು ಜನರಿಗೆ ಹೆಚ್3ಎನ್2 ವೈರಸ್ ತಗುಲಿರುವುರು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೊಮಾರ್ಬಿಡಿಟಿ ಮತ್ತು 60 ವರ್ಷ ಮೇಲ್ಪಾಟವರ ಮೇಲೆ ನಿಗಾ ಇಡಲು ಆರೋಗ್ಯ ಇಲಾಖೆ ಮುಂದಾಗಿದೆ. ಈ ಮೊದಲ ಸಾವಿನ ಬಗ್ಗೆ ಆಡಿಟ್ ಮಾಡಲು ಮುಂದಾಗಿದ್ದು, ಯಾರು ಸೆಲ್ಪ್ ಟ್ರಿಟ್ಮೆಂಟ್ ತೆಗೆದುಕೊಳ್ಳದೇ ವೈದ್ಯರನ್ನು ಸಂಪರ್ಕಿಸಲು ಆಯುಕ್ತ ರಂದೀಪ್ ಸಲಹೆ ನೀಡಿದ್ದಾರೆ.