Connect with us

  LATEST NEWS

  ದೆಹಲಿಯಲ್ಲಿ ಹೊಸ ಕಾನೂನಿನನ್ವಯ ಮೊದಲ ಎಫ್ಐಆರ್

  ನವದೆಹಲಿ ಜುಲೈ 01 : ದೇಶದಲ್ಲಿ ಇದಿನಿಂದ ಮೂರು ಹೊಸ ಕಾನೂನು ಜಾರಿಗೆ ಬಂದಿದೆ. ಭಾರತೀಯ ನ್ಯಾಯ ಸಂಹಿತೆ 2023ರ ಅಡಿಯಲ್ಲಿ ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಮೊದಲ ಎಫ್‌ಐಆರ್ ದಾಖಲಾಗಿದೆ.


  ಆರೋಪಿಯನ್ನು ಬಿಹಾರದ ಬರ್ಹ್ ನಿವಾಸಿ ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ. ಅವರು ರೈಲು ನಿಲ್ದಾಣದ ಮುಖ್ಯರಸ್ತೆಯ ಬಳಿ ಎತ್ತಿನಗಾಡಿಯಲ್ಲಿ ತಂಬಾಕು ಮಾರಾಟ ಮಾಡುತ್ತಿದ್ದರು. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದ್ದು, ಅಂಗಡಿಯನ್ನು ತೆರವುಗೊಳಿಸುವಂತೆ ಹಲವು ಬಾರಿ ಸೂಚನೆ ನೀಡಿದರೂ ನಿರ್ಲಕ್ಷ್ಯ ತೋರಿದ್ದರು ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.
  ದೆಹಲಿಯ ರೈಲು ನಿಲ್ದಾಣದ ಸ್ಕೈ ವಾಕ್ ಬಳಿ ತಂಬಾಕು ಮಾರಾಟ ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 285ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

  Share Information
  Advertisement
  Click to comment

  You must be logged in to post a comment Login

  Leave a Reply