Connect with us

LATEST NEWS

ಭಾರತದಲ್ಲಿ ಮೊದಲ ಶಂಕಿತ ‘ಮಂಕಿಪಾಕ್ಸ್’ ವೈರಸ್ ಪ್ರಕರಣ ಪತ್ತೆ, High Alert..!

ನವದೆಹಲಿ : ಭಾರತದಲ್ಲಿ ಮೊದಲ ಶಂಕಿತ ‘ಮಂಕಿಪಾಕ್ಸ್’ (Mpox)  ವೈರಸ್ ಪ್ರಕರಣ ಪತ್ತೆಯಾಗಿದ್ದು  ಹೊರ ದೇಶದಿಂದ  ಇತ್ತೀಚೆಗೆ ಭಾರತಕ್ಕೆ ಬಂದ ವ್ಯಕ್ತಿಗೆ ಮಂಕಿಪಾಕ್ಸ್ (ಎಂಪಾಕ್ಸ್) ಬಂದಿದೆ ಎಂದು ಶಂಕಿಸಲಾಗಿದೆ.

 

ಈ ಬಗ್ಗೆ  ಕೇಂದ್ರ ಆರೋಗ್ಯ ಸಚಿವಾಲಯ ಅಧಿಕೃತ ಮಾಹಿತಿ ನೀಡಿದೆ. ರೋಗಿಯನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ ಮತ್ತು ಆರೋಗ್ಯವು ಸದ್ಯ ಸ್ಥಿರವಾಗಿದೆ ಎಂದು ವರದಿ ಉಲ್ಲೇಖಿಸಿದೆ. ಆದರೆ ಎಲ್ಲಿ ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿ ನೀಡಲಾಗಿಲ್ಲ. ಮಂಕಿಪಾಕ್ಸ್ ಇದೆಯೇ ಎಂದು ತಿಳಿಯಲು ರೋಗಿಯ ರಕ್ತದ ಮಾದರಿಯ ಪರೀಕ್ಷೆ ನಡೆಸಲಾಗುತ್ತಿದೆ ಎಂದೂ ತಿಳಿಸಲಾಗಿದೆ. ಹಾಗೆಯೇ ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆಯಿಲ್ಲ ಎಂದು ಹೇಳಿದೆ. ಪ್ರಯಾಣ-ಸಂಬಂಧಿತ ಪ್ರಕರಣಗಳನ್ನು ಎದುರಿಸಲು ದೇಶವು ಸಂಪೂರ್ಣವಾಗಿ ಸಿದ್ಧವಾಗಿದೆ ಮತ್ತು ಯಾವುದೇ ಸಂಭಾವ್ಯ ಅಪಾಯವನ್ನು ನಿರ್ವಹಿಸಲು ಮತ್ತು ತಗ್ಗಿಸಲು ದೃಢವಾದ ಕ್ರಮಗಳನ್ನು ಹೊಂದಿದೆ ಎಂದು ಸಚಿವಾಲಯ ತಿಳಿಸಿದೆ. ಆಫ್ರಿಕಾದ ಕಾಂಗೋ ಸೇರಿದಂತೆ 13 ದೇಶಗಳಲ್ಲಿ ಮಂಕಿಪಾಕ್ಸ್​ ಕಾಯಿಲೆ ವೇಗವಾಗಿ ಹರಡುತ್ತಿರುವ ಕಾರಣ ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ಜಾಗತಿಕ ಆರೋಗ್ಯ ತುರ್ತುಸ್ಥಿತಿ ಘೋಷಿಸಿದೆ.

ಏನಿದು ಮಂಕಿಪಾಕ್ಸ್, ಲಕ್ಷಣಗಳೇನು?

ಮಂಕಿಪಾಕ್ಸ್ ಕೂಡಾ ಸಿಡುಬಿನ ಒಂದು ಪ್ರಭೇಡವಾಗಿದೆ. ಸಾಮಾನ್ಯ ಸಿಡುಬುಗಳಲ್ಲಿ ಬರುವಂತೆ ಇದರಲ್ಲಿಯೂ ಜ್ವರ, ತಲೆನೋವು, ಮೈ-ಕೈ ನೋವು, ಬೆನ್ನು ನೋವು, ಸುಸ್ತು ಕಾಣಿಸಿಕೊಳ್ಳುತ್ತದೆ. ಚರ್ಮ ಕೆಂಪಾಗಿ ಬೊಕ್ಕೆಗಳು ಶರೀರದ ಎಲ್ಲೆಡೆ ಕಾಣಿಸಿಕೊಳ್ಳುತ್ತದೆ. ಇದು ಸಾಮಾನ್ಯವಾಗಿ ಎರಡರಿಂದ ನಾಲ್ಕು ವಾರಗಳಲ್ಲಿ ಚಿಕಿತ್ಸೆ ಇಲ್ಲದಿದ್ದರೂ ಕಡಿಮೆಯಾಗುತ್ತದೆ. ಆದರೆ ಕ್ಯಾನ್ಸರ್, ಮಧುಮೇಹ ಇರುವವರು, ನವಜಾತ ಶಿಶುಗಳಿಗೆ ಮಂಕಿಪಾಕ್ಸ್ ಪ್ರಾಣಕ್ಕೆ ಕುತ್ತಾಗಬಹುದು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *