Connect with us

    LATEST NEWS

    ಮಂಗಳೂರು- ಫಿಶ್ ಪ್ಯಾಕ್ಟರಿಯಲ್ಲಿ ದುರಂತ ಮೂವರು ಸಾವು ಐವರು ಗಂಭೀರ

    ಮಂಗಳೂರು ಎಪ್ರಿಲ್ 18: ಮೀನಿನ ಫ್ಯಾಕ್ಟರಿಯೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಮೂರು ಮಂದಿ ಕಾರ್ಮಿಕರು ಸಾವನಪ್ಪಿರುವ ಘಟನೆ ಮಂಗಳೂರಿನ ಎಂಎಸ್​ಇಝಡ್​ ನಲ್ಲಿ ನಡೆದಿದೆ.


    ಮೃತರನ್ನು ಪಶ್ಚಿಮ ಬಂಗಾಳದ ಉಮರ್ ಫಾರೂಕ್, ನಿಝಾಮುದ್ದೀನ್ ಸಾಬ್, ಸಮೀರುಲ್ಲಾ ಇಸ್ಲಾಂ ಎಂದು ಗುರುತಿಸಲಾಗಿದೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಈ ಮೀನಿನ ಫ್ಯಾಕ್ಟರಿಯಲ್ಲಿ ರಾತ್ರಿ ವೇಳೆ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕ್​ನ್ನು ಶುಚಿಗೊಳಿಸಲು ಕೆಳಗಿಳಿದಿದ್ದು, ಈ ಸಂದರ್ಭದಲ್ಲಿ ಏಕಾಏಕಿ ಅಸ್ವಸ್ಥಗೊಂಡು ಬಿದ್ದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು ಇತರ ಕಾರ್ಮಿಕರು ಹೋಗಿದ್ದಾರೆ. ಈ ವೇಳೆ ಅವರು ಕೂಡಾ ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ. ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಮೂರು ಮಂದಿ ಮೃತಪಟ್ಟಿದ್ದರೆ, ಐವರ 5 ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply