Connect with us

    LATEST NEWS

    ಫಿಶ್ ಪ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ – ಸಾವಿನ ಸಂಖ್ಯೆ 5ಕ್ಕೆ ಏರಿಕೆ

    ಮಂಗಳೂರು ಎಪ್ರಿಲ್ 18: ವಿಶೇಷ ಆರ್ಥಿಕ ವಲಯ ಮೀನಿನ ಫ್ಯಾಕ್ಟರಿಯಲ್ಲಿ ಸಂಭವಿಸಿದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಶ್ರೀ ಉಲ್ಕಾ ಎಲ್​ಎಲ್​ಪಿ ಮೀನು ಸಂಸ್ಕರಣಾ ಕಂಪನಿಯ ತ್ಯಾಜ್ಯ ಸಂಗ್ರಹ ತೊಟ್ಟಿಯಲ್ಲಿ ವಿಷಾನಿಲ ಸೋರಿಕೆಯಾಗಿ ಈ ದುರಂತ ಸಂಭವಿಸಿದೆ.ಮೃತಪಟ್ಟವರೆಲ್ಲರೂ ಪಶ್ಚಿಮ ಬಂಗಾಳ ಮೂಲದವರು.


    ಭಾನುವಾರ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದ. ಈ ವೇಳೆ ಏಕಾಏಕಿ ವಿಷಾನಿಲ ಸೋರಿಕೆಯಾಗಿ ಆತ ಅಸ್ವಸ್ಥಗೊಂಡು ಬಿದ್ದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು 8 ಕಾರ್ಮಿಕರು ಹೋಗಿದ್ದಾರೆ. ಈ ವೇಳೆ ಅವರು ಕೂಡ ಅಸ್ವಸ್ಥಗೊಂಡು, ಉಸಿರಾಟದಲ್ಲಿ ಏರುಪೇರಾಗಿತ್ತು. ಕೂಡಲೇ ಅವರೆಲ್ಲರನ್ನೂ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಅಷ್ಟರಲ್ಲಿ ಮೂವರು ಮೃತಪಟ್ಟಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಐವರ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply