Connect with us

    LATEST NEWS

    ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮೀನಿನ ಟೆಂಪೋ….!!

    ಉಡುಪಿ ಸೆಪ್ಟೆಂಬರ್ 20: ಮೀನಿನ ಟೆಂಪೋ ಒಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಉಡುಪಿಯ ಪಡುಬಿದ್ರಿ ರಾಷ್ಟ್ರಿಯ ಹೆದ್ದಾರಿ 66ರ ಪೆಟ್ರೋಲ್ ಪಂಪ್ ಬಳಿ ನಡೆದಿದೆ.

    ಮಲ್ಪೆಯಿಂದ ಮಂಗಳೂರು ಕಡೆ ಗೊಬ್ಬರದ ಮೀನನ್ನು ಹೇರಿಕೊಂಡು ಸಾಗುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಮಗುಚಿ ಬಿದ್ದಿದೆ. ಟೆಂಪೋ ಚಾಲಕನಿಗೆ ಸಣ್ಣ ಪ್ರಮಾಣದ ಗಾಯವಾಗಿದೆ. ಹೆಜಮಾಡಿ ಟೋಲ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಹೆದ್ದಾರಿಯಿಂದ ವಾಹನವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಆನುವು ಮಾಡಿದ್ದಾರೆ. ಸ್ಥಳಕ್ಕೆ ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply