LATEST NEWS
ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರಿ ಮೇಲೆ ತಲವಾರು ದಾಳಿ
ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರಿ ಮೇಲೆ ತಲವಾರು ದಾಳಿ
ಉಡುಪಿ ಜೂನ್ 7 : ಮುಸುಕುಧಾರಿ ದುಷ್ಕರ್ಮಿಗಳ ತಂಡವೊಂದು ಮಂಗಳೂರಿನ ಮೀನು ವ್ಯಾಪಾರಿಯೊಬ್ಬರ ಮೇಲೆ ಮಲ್ಪೆ ಮೀನುಗಾರಿಕಾ ಬಂದರ್ ನಲ್ಲಿ ತಲವಾರು ದಾಳಿ ನಡೆಸಿರುವ ಘಟನೆ ನಡೆದಿದೆ.
ದುಷ್ಕರ್ಮಿಗಳಿಂದ ದಾಳಿಗೊಳಗಾದ ವ್ಯಕ್ಕಿಯನ್ನು ರಿಯಾಜ್ ಫರಂಗಿಪೇಟೆ ಎಂದು ಗುರುತಿಸಲಾಗಿದ್ದು, ಹಲ್ಲೆಯಿಂದಾಗಿ ತೀವ್ರ ಗಾಯಗೊಂಡಿರುವ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಯದಿಂದ ಪಾರಾಗಿದ್ದಾರೆ.
ಮಲ್ಪೆಯಲ್ಲಿ ಮೀನು ಖರೀದಿಸಿ ಮಾರಾಟ ಮಾಡಲು ಇಂದು ಮುಂಜಾನೆ 4:30 ರ ಸಮಯದಲ್ಲಿ ಇತರ ಮೂವರೊಂದಿಗೆ ಎಂದಿನಂತೆ ತನ್ನ ಪಿಕಪ್ ವಾಹನದಲ್ಲಿ ಉಡುಪಿ ಮಲ್ಪೆ ಮೀನುಗಾರಿಕಾ ಬಂದರಿಗೆ ಆಗಮಿಸಿದ್ದರು.
ಬಂದರಿನೊಳಗೆ ತಮ್ಮ ವಾಹನ ನಿಲ್ಲಿಸಿ, ಇತರ ಮೂವರು ಚಾಹ ಕುಡಿಯಲು ಇಳಿದು ಹೋಗಿದ್ದರು. ಆದರೆ ರಿಯಾಝ್ ರವರು ಅದೇ ಪಿಕಪ್ ವಾಹನದಲ್ಲಿ ನಿದ್ರೆಗೆ ಜಾರಿದ್ದರು. ಇದೇ ಸಮಯದಲ್ಲಿ ಅವರ ವಾಹನವನ್ನು ಹಿಂಬಾಲಿಕೊಂಡು ಬಿಳಿ ಬಣ್ಣದ ಕಾರಿನಲ್ಲಿ ಬಂದಿದ್ದ ನಾಲ್ವರು ರಿಯಾಝ್ ಮೇಲೆ ತಲವಾರು ದಾಳಿ ನಡೆಸಿದ್ದಾರೆ.
ಈ ಸಮಯದಲ್ಲಿ ಇವರ ಬೊಬ್ಬೆ ಕೇಳಿ ಇತರರು ಸಹಾಯಕ್ಕೆ ಧಾವಿಸಿದಾಗ, ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳೀಯರು ರಿಯಾಜ್‌ನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು ಕೈ ತೋಳು, ಕಾಲಿನ ಬೆರಳು, ತಲೆಯ ಹಿಂಬಾಗಕ್ಕೆ ಗಂಭೀರ ಗಾಯಗಳಾಗಿದೆ.
ಬಂಟ್ವಾಳದ ಕಾಂಗ್ರೆಸ್ ಕಾರ್ಯಕರ್ತನಾಗಿರುವ ರಿಯಾಜ್ ಫರಂಗಿಪೇಟೆ ಗ್ರಾಮ ಪಂಚಾಯತ್ ಸದಸ್ಯರಾಗಿದ್ದಾರೆ. ಮಲ್ಪೆ ಪೊಲೀಸರು ಪ್ರಕರಣ ದಾಖಲಿಕೊಂಡು ತನಿಖೆ ನಡೆಸುತ್ತಿದ್ದಾರೆ.