DAKSHINA KANNADA
ರಸ್ತೆ ಬದಿಯ ಮೀನು ಅಂಗಡಿಗೆ ಕಿಡಿಗೇಡಿಗಳಿಂದ ಬೆಂಕಿ…..!!

ಪುತ್ತೂರು ಅಗಸ್ಟ್ 23: ಮೀನು ಮಾರಾಟದ ಅಂಗಡಿಯೊಂದು ತಡರಾತ್ರಿ ಬೆಂಕಿಗ ಆಹುತಿಯಾದ ಘಟನೆ ಉಪ್ಪಿನಂಗಡಿಯ ಸುಬ್ರಹ್ಮಣ್ಯ ಕ್ರಾಸ್ ಬಳಿ ನಡೆದಿದೆ. ಕಿಡಿಗೇಡಿಗಳು ಅಂಗಡಿಗೆ ಬೆಂಕಿ ಹಚ್ಚಿರಿವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಳೆಗೇಟು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಅಶೋಕ್ ಎಂಬವರಿಗೆ ಸೇರಿದ ಅಂಗಡಿ ಇದಾಗಿದೆ. ಘಟನೆಯಿಂದ ಮೀನಿನ ಅಂಗಡಿ ಹಾಗೂ ಮಂಜುಗಡ್ಡೆ ಹಾಕಿ ಶೇಖರಿಸಿಟ್ಟಿದ್ದ ಮೀನು ಸುಟ್ಟು ಹೋಗಿವೆ.

ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಇಂದು ಬೆಳಗ್ಗೆ ಸ್ಥಳಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸೋಮವಾರ ಬೆಳಗ್ಗೆ ಸಂಘ ಪರಿವಾರದ ಸಂಘಟನೆಯ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದು ಬೆಂಕಿ ಹಚ್ಚಿರುವ ಕಿಡಿಗೇಡಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದಾರೆ.