LATEST NEWS
ಗಂಗೊಳ್ಳಿ ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ಸಾವು

ಗಂಗೊಳ್ಳಿ ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ಸಾವು
ಉಡುಪಿ ಜನವರಿ 28: ಗಂಗೊಳ್ಳಿಯಿಂದ ದೊಡ್ಡ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ ಮೀನುಗಾರರೋರ್ವರು ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಬೈಂದೂರು ತಾಲೂಕು ತ್ರಾಸಿ ಬಳಿಯ ಹೊಸಪೇಟೆ ನಿವಾಸಿ ಕೃಷ್ಣ ಖಾರ್ವಿ ಎಂದು ಗುರುತಿಸಲಾಗಿದೆ.
ಇಂದು ಉಳಿದ ಮೂವರು ಮೀನುಗಾರರೊಂದಿಗೆ ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದಿದ್ದಾರೆ. ಜೊತೆಯಲ್ಲಿದ್ದವರು ನೀರಿಗೆ ಬಿದ್ದವರನ್ನು ಮೇಲೆತ್ತುದರೊಳಗೆ ಕೃಷ್ಣ ಖಾರ್ವಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
