LATEST NEWS
ಕಾಲಿಗೆ ಬಲೆ ಸಿಕ್ಕಿ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು…!!

ಮಂಗಳೂರು ಮೇ 17: ಸಮುದ್ರದಲ್ಲಿ ಬಲೆ ಹಾಕುತ್ತಿದ್ದ ವೇಳೆ ಕಾಲಿಗೆ ಬಲೆ ಸಿಕ್ಕಿ ಸಮುದ್ರಕ್ಕೆ ಬಿದ್ದು ಮೀನುಗಾರನೊಬ್ಬ ಸಾವನಪ್ಪಿರುವ ಘಟನೆ ಮಂಗಳವಾರ ನಡೆದಿದೆ.
ಮೃತರನ್ನು ಜಯರಾಜ್ (46 ವರ್ಷ) ಎಂದು ಗುರುತಿಸಲಾಗಿದೆ. ಮೀನುಗಾರ ಬಲೆ ಹಾಕುತ್ತಿದ್ದ ವೇಳೆ ಸಮುದ್ರದಲ್ಲಿ ಮುಳುಗಿ ಮೃತ ಪಟ್ಟಿದ್ದು, ಸಮುದ್ರಕ್ಕೆ ಹಾಕಿದ ಬಲೆ ಕಾಲಿಗೆ ಸಿಲುಕಿದ್ದಲ್ಲದೆ, ಸಮುದ್ರದ ಅಲೆ ಅಪ್ಪಳಿಸಿ ಮುಳುಗಿದರು ಎನ್ನಲಾಗಿದೆ.
ಅಲ್ಲಿ ಇದ್ದ ಮೀನುಗಾರ ತಕ್ಷಣ ಸ್ಥಳೀಯರಿಗೆ ತಿಳಿಸಿದ್ದು, ಸಹಾಯಕ್ಕೆ ಧಾವಿಸಿದ ಸ್ಥಳೀಯರು ಜಯರಾಜ್ ನನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸಿದರೂ ಕೂಡ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ.ಇನ್ನೂ ಮೃತ ಜಯರಾಜ್ ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ.
