LATEST NEWS
ಮೀನುಗಾರನನ್ನು ತಲೆಕೆಳಗೆ ಮಾಡಿ ನೇತು ಹಾಕಿ ಹಲ್ಲೆ…..!!

ಮಂಗಳೂರು ಡಿಸೆಂಬರ್ 23: ಮೊಬೈಲ್ ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ಮೀನುಗಾರನೊಬ್ಬನನ್ನು ತಲೆಕೆಳಗೆ ಮಾಡಿ ನೇತು ಹಾಕಿ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹಲ್ಲೆಗೊಳಗಾದ ಮೀನುಗಾರನನ್ನು ಆಂದ್ರ ಪ್ರದೇಶ ಮೂಲದ ವೈಲ ಶೀನು ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಮೀನುಗಾರಿಕಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾನೆ. ಮಂಗಳೂರಿನ ಧಕ್ಕೆಯಲ್ಲಿ ಮೀನುಗಾರರೊಬ್ಬರ ಮೊಬೈಲ್ ಕಳೆದು ಹೋಗಿತ್ತು. ಇದನ್ನು ವೈಲ ಶೀನು ಕದ್ದಿದ್ದಾನೆ ಎಂದು ಆರೋಪಿಸಿ ಆತನನ್ನು ಮೀನುಗಾರಿಕಾ ಬೋಟ್ ನಲ್ಲಿ ಆತನ ಕಾಲಿಗೆ ಹಗ್ಗಕಟ್ಟಿ ತಲೆಕೆಳಗು ಮಾಡಿ ನೇತುಹಾಕಿ ವಿಚಾರಣೆ ನಡೆಸಿದ್ದಾರೆ.

ಇವರೆಲ್ಲರೂ ಆಂಧ್ರಪ್ರದೇಶ ಮೂಲದ ಕಾರ್ಮಿಕರಾಗಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಹಿಂದೆ ತೆಗೆಯಲಾಗಿದ್ದು, ಇದೀಗ ವೈರಲ್ ಆಗಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.