Connect with us

    DAKSHINA KANNADA

    ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಐವರು ಆರೋಪಿಗಳು NIA ವಶಕ್ಕೆ

    ಸುಳ್ಯ , ಆಗಸ್ಟ್ 19: ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ವಿಚಾರಣೆಗಾಗಿ 6 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ.

    ಈ ಪ್ರಕರಣದ ಆರೋಪಿಗಳಾದ ನೌಫಾಲ್‌, ಝೈನುಲ್‌ ಅಬಿದ್, ಮೊಹಮ್ಮದ್‌ ಸೈಯದ್‌, ಅಬ್ದುಲ್‌ ಬಶೀರ್‌ ಮತ್ತು ರಿಯಾಜ್‌ ಅವರನ್ನು ಆಗಸ್ಟ್ 23 ರ ವರೆಗೆ ಎನ್‌ಐಎ ವಶಕ್ಕೆ ಒಪ್ಪಿಸಲಾಗಿದೆ. ಪ್ರವೀಣ್‌ ನೆಟ್ಟಾರು ಅವರನ್ನು ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಕುರಿತಂತೆ ಕಾನೂನು ಬಾಹಿರ ತಡೆ ಕಾನೂನಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಬೆಳ್ಳಾರೆ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು.

    ಹೆಚ್ಚಿನ ತನಿಖೆಗಾಗಿ ರಾಜ್ಯ ಸರಕಾರ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಿತ್ತು. ಈ ಹಿನ್ನೆಲೆಯಲ್ಲಿ ತನಿಖೆಯನ್ನು ಚರುಕುಗೊಳಿಸಿರುವ ಎನ್‌ಐಎ ಅಧಿಕಾರಿಗಳು ನಿನ್ನೆ ಐವರು ಆರೋಪಿಗಳನ್ನು ತಮ್ಮ ವಶಕ್ಕೆ ಪಡೆದುಕೊಂಡು ವಿಚಾರಣೆ ಆರಂಭಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply