Connect with us

    LATEST NEWS

    ಕೇರಳ KSRTC ಬಸ್ ಗೆ ಕಾರು ಡಿಕ್ಕಿ , ಐವರು ವೈದ್ಯಕೀಯ ವಿದ್ಯಾರ್ಥಿಗಳ ದಾರುಣ ಮೃತ್ಯು..!

    ಆಲಪ್ಪುಳ( ಕೇರಳ) : ಕೇರಳ ಸಾರಿಗೆ ಸಂಸ್ಥೆ (KSRTC) ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ  ಆಲಪ್ಪುಳದ ಕಲಾರ್‌ಕೋಡ್ ನಲ್ಲಿ ಸಂಭವಿಸಿದೆ.

    ಕೆಎಸ್‌ಆರ್‌ಟಿಸಿ ಸೂಪರ್-ಫಾಸ್ಟ್ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಸೋಮವಾರ ರಾತ್ರಿ ಸುಮಾರು 10 ಗಂಟೆಗೆ ಈ ದುರ್ಘಟನೆ ಸಂಭವಿಸಿದ್ದು, ತೀವ್ರ ಮಳೆಯೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ.  ವಿದ್ಯಾರ್ಥಿಗಳಲ್ಲದೆ, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಪ್ರಯಾಣಿಕರಿಗೂ ಗಂಭೀರ ಗಾಯಗಳಾಗಿವೆ.ಮೃತಪಟ್ಟರನ್ನು ಲಕ್ಷದ್ವೀಪ ಮೂಲದ ದೇವಾನಂದನ್ ಮತ್ತು ಮುಹಮ್ಮದ್ ಇಬ್ರಾಹಿಂ , ಆಯುಷ್ ಶಾಜಿ, ಶ್ರೀದೀಪ್ ವಲ್ಸನ್ ಮತ್ತು ಮುಹಮ್ಮದ್ ಜಬ್ಬಾರ್  ಎಂದು ಗುರುತಿಸಲಾಗಿದ್ದು ಎಲ್ಲರೂ  ಅಲಪ್ಪುಳ  ಟಿಡಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.

    ಮಾಹಿತಿಯ ಮೇರೆಗೆ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡವು ಕಾರಿನ ಜಖಂಗೊಂಡ ಅವಶೇಷಗಳಿಂದ ಸಂತ್ರಸ್ತರನ್ನು ಹೊರತೆಗೆಯಲು ಕತ್ತರಿಸುವ ಸಾಧನಗಳನ್ನು ಬಳಸಬೇಕಾಯಿತು. ತೀವ್ರವಾಗಿ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ವಂದನಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ವಿದ್ಯಾರ್ಥಿಗಳು ಕೋಝಿಕ್ಕೋಡ್, ಕಣ್ಣೂರು, ಚೆರ್ತಾಲ ಮತ್ತು ಲಕ್ಷದ್ವೀಪ ಸೇರಿದಂತೆ ವಿವಿಧ ಪ್ರದೇಶಗಳಿಂದ ಬಂದವರು. ಅಪಘಾತದ ಸಂದರ್ಭದಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು ನಾಲ್ವರು ಪ್ರಯಾಣಿಕರಿಗೂ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *