LATEST NEWS
ತಿರುವಳ್ಳೂರು ಬಳಿ ಹೊತ್ತಿ ಉರಿದ ಡಿಸೇಲ್ ತುಂಬಿದ್ದ ಗೂಡ್ಸ್ ರೈಲು; ಸಂಚಾರ ರೈಲು ವ್ಯತ್ಯಯ

ಚೆನ್ನೈ ಜುಲೈ 13: ಇಂಧನ ಸಾಗಿಸುತ್ತಿದ್ದ ಟ್ಯಾಂಕರ್ ರೈಲಿನ 5 ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು, ಇದೀಗ ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿ ರೈಲು ಸೇವೆಗಳು ಸ್ಥಗಿತಗೊಂಡಿದ್ದರಿಂದ ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು.
ತಿರುವಳ್ಳೂರು ರೈಲು ನಿಲ್ದಾಣದ ಬಳಿ ಭಾನುವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ರೈಲು ನಿಲ್ದಾಣದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ. ಎನ್ನೋರ್‌ನಿಂದ ಜೋಲಾರ್‌ಪೆಟ್ಟೈಗೆ ಕಚ್ಚಾ ತೈಲ ಸಾಗಿಸುತ್ತಿದ್ದ 45 ಬೋಗಿಗಳನ್ನು ಹೊಂದಿರುವ ಗೂಡ್ಸ್ ರೈಲು ಚೆನ್ನೈ ಸೆಂಟ್ರಲ್‌ನಿಂದ 43 ಕಿ.ಮೀ ದೂರದಲ್ಲಿರುವ ತಿರುವಲ್ಲೂರು-ಎಗತ್ತೂರು ವಿಭಾಗದ ಮೂಲಕ ಹಾದುಹೋಗುವಾಗ ಬೆಳಗ್ಗೆ 4.45 ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿತು. ಎರಡು ವ್ಯಾಗನ್‌ಗಳು ಹಳಿ ತಪ್ಪಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಅಪಘಾತದ ನಿಖರವಾದ ಕಾರಣ ಇನ್ನೂ ತನಿಖೆಯಲ್ಲಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಬೆಳಗ್ಗೆ 9 ಗಂಟೆಯ ಹೊತ್ತಿಗೆ, ಐದು ಬೋಗಿಗಳನ್ನು ರೇಕ್‌ನಿಂದ ಬೇರ್ಪಡಿಸಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿದಂತೆ ಇತರೆ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ರೈಲು ಸಂಚಾರ ಆದಷ್ಟು ಬೇಗ ಪುನರಾರಂಭಗೊಳ್ಳುತ್ತದೆ ಎಂದು ದಕ್ಷಿಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.