LATEST NEWS
ಮಂಗಳೂರು ವಿಮಾನ ನಿಲ್ದಾಣದಿಂದ ಮೇ 25 ರಿಂದ ದೇಶಿಯ ವಿಮಾನ ಹಾರಾಟ
ಮಂಗಳೂರು ವಿಮಾನ ನಿಲ್ದಾಣದಿಂದ ಮೇ 25 ರಿಂದ ದೇಶಿಯ ವಿಮಾನ ಹಾರಾಟ
ಮಂಗಳೂರು ಮೇ.23: ಕೊರಾನಾ ಲಾಕ್ ಡೌನ್ ನಡುವೆ ಸಂಪೂರ್ಣ ಸ್ತಬ್ದವಾಗಿದ್ದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮೇ 25 ರಿಂದ ಮತ್ತೆ ವಿಮಾನ ಹಾರಾಟ ಪ್ರಾರಂಭವಾಗಲಿದೆ. ಸದ್ಯ ದೇಶಿಯ ವಿಮಾನ ಹಾರಾಟಕ್ಕೆ ಮಾತ್ರ ಅವಕಾಶ ಇರುವುದರಿಂದ ಸೋಮವಾರದಿಂದ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರು, ಮುಂಬೈ, ಚೆನ್ನೈಗೆ ವಿಮಾನಗಳ ಹಾರಾಟ ಪ್ರಾರಂಭವಾಗಲಿದೆ.
ವಿಮಾನ ಹಾರಾಟದ ಬಗ್ಗೆ ಸ್ಪೈಸ್ ಜೆಟ್ ತನ್ನ ವೇಳಾಪಟ್ಟಿ ಬಿಡುಗಡೆಗೊಳಿಸಿದ್ದು, ಏರ್ ಇಂಡಿಯಾ ವೇಳಾಪಟ್ಟಿಯನ್ನೂ ಬಿಡುಗಡೆ ಮಾಡಿಲ್ಲ.
ಇನ್ನು ದೇಶಿಯ ವಿಮಾನ ಹಾರಾಟದ ವೇಳೆ 14 ವರ್ಷಕ್ಕಿಂತ ಕೆಳಗಿನ ಮಕ್ಕಳು ಹೊರತುಪಡಿಸಿ ಉಳಿದ ಪ್ರಯಾಣಿಕರು ಆರೋಗ್ಯ ಸೇತು ಆಪ್ ನ್ನು ಕಡ್ಡಾಯವಾಗಿ ಡೌನ್ ಲೋಡ್ ಮಾಡಿಕೊಳ್ಳಬೇಕಾಗುತ್ತದೆ. ವಿಮಾನ ನಿಲ್ದಾಣಕ್ಕೆ ಪ್ರವೇಶಿಸುವ ಮುನ್ನ ಪ್ರಯಾಣಿಕರ ಥರ್ಮಲ್ ಸ್ಕ್ರೀನಿಂಗ್, ಪ್ರಯಾಣಿಕರ ಲಗ್ಗೇಜು ಟರ್ಮಿನಲ್ ಗೆ ಪ್ರವೇಶಿಸುವ ಮುನ್ನ ಶುಚಿಗೊಳಿಸುವುದು ಕೂಡ ಈ ಕಾರ್ಯಾಚರಣೆಯಲ್ಲಿ ಸೇರಿಕೊಂಡಿದೆ.
ಮೇ 25 ರಿಂದ ಮಂಗಳೂರಿನಿಂದ ಇಂಡಿಗೋದ 3 ವಿಮಾನಗಳು ಮುಂಬೈ, ಬೆಂಗಳೂರು, ಚೆನ್ನೈಗೆ ಸಂಚರಿಸಲಿದೆ. ಸ್ಪೈಸ್ ಜೆಟ್ನ 3 ವಿಮಾನಗಳು ಬೆಂಗಳೂರು, ಮುಂಬೈಗೆ ಸಂಚರಿಸಲಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 8.30ಕ್ಕೆ, ರಾತ್ರಿ 7 ಗಂಟೆಗೆ ಮತ್ತು ಇಂಡಿಗೋ ವಿಮಾನ ಸಂಜೆ 5.55ಕ್ಕೆ, ಮಂಗಳೂರಿನಿಂದ ಬೆಂಗಳೂರಿಗೆ ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 10.20ಕ್ಕೆ, ರಾತ್ರಿ 9.35 ಹಾಗೂ ಇಂಡಿಗೋ ಸಂಜೆ 7.30ಕ್ಕೆ ಸಂಚರಿಸಲಿದೆ.
ಮುಂಬೈನಿಂದ ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 7.05ಕ್ಕೆ, ಇಂಡಿಗೋ ಬೆಳಗ್ಗೆ 9.30ಕ್ಕೆ ಮಂಗಳೂರಿಗೆ ಹೊರಡಲಿವೆ. ಮಂಗಳೂರಿನಿಂದ ಮುಂಬೈಗೆ ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 9.05ಕ್ಕೆ ಇಂಡಿಗೋ 11.40 ಕ್ಕೆ ತೆರಳಲಿದೆ. ಚೆನ್ನೈನಿಂದ ಮಂಗಳೂರಿಗೆ ಸಂಜೆ 5.45ಕ್ಕೆ ಹಾಗೂ ಮಂಗಳೂರಿನಿಂದ ಚೆನ್ನೈಗೆ ರಾತ್ರಿ 8.05ಕ್ಕೆ ಇಂಡಿಗೋ ವಿಮಾನ ಸಂಚರಿಸಲಿದೆ ಎಂದು ಇಂಡಿಗೋ ಮತ್ತು ಸ್ಪೈಷ್ ಜೆಟ್ ಪ್ರಕಟನೆ ತಿಳಿಸಿದೆ.