KARNATAKA
6 ತಿಂಗಳ ಮಗುವನ್ನು ಹೊರ ತೆಗೆದು ಕಾವೇರಿ ನದಿಗೆ ಬಿಸಾಕಿ ಬರುತ್ತಿದ್ದೆವು – ಬ್ರೂಣ ಹತ್ಯೆ ಪ್ರಕರಣದಲ್ಲಿ ನರ್ಸ್ ಸ್ಪೋಟಕ ಹೇಳಿಕೆ
ಬೆಂಗಳೂರು ಡಿಸೆಂಬರ್ 2: ಇಡೀ ರಾಜ್ಯವನ್ನೇ ಬೆಚ್ಚಿಬಿಳಿಸಿದ್ದ ಬ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಒಂದೊಂದೆ ಭೀಕರ ಮಾಹಿತಿಗಳು ಹೊರ ಬರಲಾರಂಭಿಸಿದ್ದು, ಈಗಾಗಲೇ ಪೊಲೀಸ್ ಕೈಗೆ ಸಿಕ್ಕಿಬಿದ್ದಿರುವ ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡಿದ್ದೇನೆ ಹಾಗೂ 6 ತಿಂಗಳ ಮಗುವನ್ನೂ ಹೊರೆತೆಗೆದಿದ್ದೇನೆಂದು ತಪ್ಪೊಪ್ಪಿಕೊಂಡಿದ್ದಾಳೆ.
ಮೈಸೂರು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಾತಾ ಆಸ್ಪತ್ರೆಯ ನರ್ಸ್ ಮಂಜುಳಾಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಮಾಹಿತಿಯನ್ನು ಆಕೆ ಬಹಿರಂಗಪಡಿಸಿದ್ದಾಳೆ. ತಿಂಗಳಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ. ಆ ಮಕ್ಕಳಿಗೆ ಜೀವ ಇರುತ್ತಿತ್ತು. 6 ತಿಂಗಳ ಮಗುವಿಗೆ ಧ್ವನಿ ಇರುವುದಿಲ್ಲ. ಮಗು ಹೊರಗೆ ತೆಗೆದ 5 ರಿಂದ 10 ನಿಮಿಷದಲ್ಲಿ ಸಾಯುತ್ತಿದ್ದವು. ಅದನ್ನು ಪೇಪರ್ನಲ್ಲಿ ಸುತ್ತಿ ನಿಸಾರ್ಗೆ ಕೊಡುತ್ತಿದ್ದೆ. ನಿಸಾರ್ ಆ ಮಗುವನ್ನು ತೆಗೆದುಕೊಂಡು ಹೋಗಿ ಕಾವೇರಿ ನದಿಗೆ ಬಿಸಾಕಿ ಬರುತ್ತಿದ್ದ. 12 ವಾರ ಕಳೆದ ಮಕ್ಕಳನ್ನು ಅಬಾರ್ಟ್ ಮಾಡಿ ಮೆಡಿಕಲ್ ವೇಸ್ಟ್ಗೆ ಹಾಕುತ್ತಿದ್ದೆವು. 4 ದಿನಕ್ಕೆ ಮೆಡಿಕಲ್ ವೇಸ್ಟ್ ಅಲ್ಲಿ ಮಗು ಕೊಳೆತು ಹೋಗುತ್ತಿತ್ತು ಎಂದು ಹೇಳಿದ್ದಾಳೆ.
ಕಳೆದೊಂದು ವರ್ಷದಿಂದ ನಾನು ಚಂದನ್ ಬಲ್ಲಾಳ್ ಬಳಿ ಕೆಲಸ ಮಾಡುತ್ತಿದ್ದೆ. ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡಿದ್ದೇನೆ. ಈ ಮೊದಲು ರೀಸ್ಮಾ ಅಬಾರ್ಷನ್ ಮಾಡುವ ಕೆಲಸವನ್ನು ಮಾಡುತ್ತಿದ್ದಳು. ಅವಳಾದ ಬಳಿಕ ನಾನು ಮಗುವನ್ನು ಅಬಾರ್ಷನ್ ಮಾಡುವುದಕ್ಕೆ ಸೇರಿಕೊಂಡಿದ್ದೆ. 6 ತಿಂಗಳ ಮಗುವನ್ನು ನಾನು ಅಬಾರ್ಷನ್ ಮಾಡಿದ್ದೇನೆ. ನಿಸಾರ್ ಮಗುವನ್ನು ಕಾವೇರಿ ನದಿಗೆ ಎಸೆದು ಬರುತ್ತಿದ್ದ. ಯಾವ ಜಾಗದಲ್ಲಿ ಆ ಮಗುವನ್ನು ಬಿಸಾಕುತ್ತಿದ್ದ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ನದಿಯನ್ನು ಬಿಟ್ಟು ಬೇರೆ ಜಾಗದಲ್ಲಿ ಬಿಸಾಕಿದರೆ ಅವಷೇಶಗಳು ಸಿಕ್ಕಿಬಿಡುತ್ತದೆ. ಹೀಗಾಗಿ ನಿಸಾರ್ ಮಗುವನ್ನು ಬಿಸಾಕುವ ಕೆಲಸ ಮಾಡುತ್ತಿದ್ದ.
6 ತಿಂಗಳ ಮಗುವನ್ನು ಸಿಸೇರಿಯನ್ ಮೂಲಕ ಹೆರಿಗೆ ರೀತಿಯಲ್ಲಿ ಮಾಡುತ್ತಿದ್ದೆವು. ಸಿ ಸೆಕ್ಷನ್ ಮೂಲಕ ತೆಗೆದು ಟೇಬಲ್ ಮೇಲೆ ಇಡಲಾಗುತ್ತಿತ್ತು. 5 ರಿಂದ 10 ನಿಮಿಷಕ್ಕೆ ಆ ಮಗು ಸಾಯುತ್ತಿತ್ತು. ತಾಯಿಗೆ ಪ್ರಜ್ಞೆ ಇಲ್ಲದಂತೆ ಮಾಡಿ ಸಿ ಸೆಕ್ಷನ್ ಮಾಡಲಾಗುತ್ತಿತ್ತು ಎಂಬ ಮಾಹಿತಿ ಪೊಲೀಸರಿಗೆ ನೀಡಿದ್ದಾಳೆ.