LATEST NEWS
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು ವಿಮಾನ ಹಾರಾಟದಲ್ಲಿ ವ್ಯತ್ಯಯ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು ವಿಮಾನ ಹಾರಾಟದಲ್ಲಿ ವ್ಯತ್ಯಯ
ಮಂಗಳೂರು ಮಾರ್ಚ್ 11: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು ಕವಿದ ಕಾರಣ ವಿಮಾನಗಳ ಹಾರಾಟದಲ್ಲಿ ತೊಂದರೆ ಉಂಟಾಗಿದೆ.
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆಯಿಂದ ದಟ್ಟ ಮಂಜು ಕವಿದ ವಾತಾವರಣ ಹಿನ್ನಲೆಯಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿತ್ತು. ದಟ್ಟ ಮಂಜು ಕವಿದ ಹಿನ್ನಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ 4 ವಿಮಾನಗಳನ್ನು ಬೆಂಗಳೂರಿನತ್ತ ಡೈವರ್ಟ್ ಮಾಡಲಾಗಿದೆ.

ಅಬುದಾಬಿ ಹಾಗೂ ಬೆಂಗಳೂರಿನಿಂದ ಮಂಗಳೂರಿನತ್ತ ಬರುತ್ತಿದ್ದ ಜೆಟ್ ಏರ್ ವೇಸ್ ನ ಎರಡು ವಿಮಾನಗಳನ್ನು ಬೆಂಗಳೂರಿಗೆ ಡೈವರ್ಟ್ ಮಾಡಲಾಗಿದೆ.
ಈ ನಡುವೆ ಸಚಿವ ಖಾದರ್ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಜೆಟ್ ಏರ್ ವೇಸ್ ವಿಮಾನವನ್ನು ಕೂಡ ಮತ್ತೆ ಬೆಂಗಳೂರಿಗೆ ಡೈವರ್ಟ್ ಮಾಡಲಾಗಿದೆ. ಅಲ್ಲದೆ ಹೈದರಬಾದ್ ನಿಂದ ಮಂಗಳೂರಿಗೆ ಬರುತ್ತಿದ್ದ ಸ್ಪೈಸ್ ಜೆಟ್ ವಿಮಾನವನ್ನು ಕೂಡ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಡೈವರ್ಟ್ ಮಾಡಲಾಗಿದೆ.