LATEST NEWS
ಮಂಗಳೂರು – ಅನಧಿಕೃತ ಅಂಗಡಿಗಳ ತೆರವಿಗೆ ಕ್ರಮ ಟೈಗರ್ ಕಾರ್ಯಾಚರಣೆ
ಮಂಗಳೂರು ಜುಲೈ 28- ಉದ್ದಿಮೆ ಪರವಾನಗಿ ಪಡೆಯದೇ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‍ಗಳಲ್ಲಿ ಕಾನೂನು ಬಾಹಿರವಾಗಿ ರಸ್ತೆ ಬದಿಯಲ್ಲಿ ಹಾಗೂ ಫುಟ್ ಪಾತ್‍ಗಳಲ್ಲಿ ಬೀದಿ-ಬದಿ ವ್ಯಾಪಾರಸ್ಥರು ಅನಧಿಕೃತವಾಗಿ ಅಂಗಡಿಗಳು, ಗೂಡಂಗಡಿ ಮೂಲಕ ಇತರೆ ವ್ಯಾಪಾರ ವಹಿವಾಟುಗಳನ್ನು ಎಲ್ಲೆಂದರಲ್ಲಿ ನಡೆಸುತ್ತಿರುವುದರಿಂದ ಸಾರ್ವಜನಿಕರಿಗೆ, ಪಾದಚಾರಿಗಳಿಗೆ ಓಡಾಡಲು ಹಾಗೂ ವಾಹನ ಸವಾರನಿಗೆ ರಸ್ತೆತಡೆ ಉಂಟಾಗಿ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ.
ಆದ ಕಾರಣ ಟೈಗರ್ ಕಾರ್ಯಾಚರಣೆ ಮೂಲಕ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿರುವ ಬೀದಿ-ಬದಿ ವ್ಯಾಪಾರಸ್ಥರ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.