Connect with us

    FILM

    ರಾಮಮಂದಿರ ನಿರ್ಮಾಣಕ್ಕೆ ನಟಿ ಪ್ರಣೀತಾರಿಂದ ರೂ. 1 ಲಕ್ಷ ರೂ. ದೇಣಿಗೆ..!

    ಬೆಂಗಳೂರು : ಬಹುಭಾಷಾ ನಟಿ ಪ್ರಣೀತಾ ಸುಭಾಷ್ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ 1 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.

    ಈ ಮೂಲಕ ಅಭಿಮಾನಿಗಳ ಮೆಚ್ಚುಗೆಗೆ ಪ್ರಣೀತಾ ಪಾತ್ರರಾಗಿದ್ದಾರೆ. ಅಯೋಧ್ಯೆಯ ಶ್ರೀ ರಾಮಮಂದಿರ ನಿಧಿ ಸಮರ್ಪಣ ಅಭಿಯಾನಕ್ಕೆ ಬೆಂಬಲಿಸಿ 1 ಲಕ್ಷ ರೂ. ನಟಿ ನೀಡಿದ್ದಾರೆ. ಈ ಕುರಿತು ಪ್ರಣೀತಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದೊಂದು ಐತಿಹಾಸಿಕ ಚಳುವಳಿ ಎಂದು ಬರೆದು ನಟಿ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ನೀವೆಲ್ಲರೂ ಕೈಜೋಡಿಸಿ ಇದರ ಭಾಗವಾಗಬೇಕೆಂದು ನಾನು ವಿನಂತಿಸುತ್ತೇನೆ ಎಂದು ಪ್ರಣೀತಾ ಮನವಿ ಮಾಡಿದ್ದಾರೆ.ಪ್ರಣೀತಾ ಫೌಂಡೇಶನ್‌ ಮೂಲಕ ನಟಿ ಪ್ರಣೀತಾ ಸಾಕಷ್ಟು ಸಾಮಾಜಿಕ ಕಾರ್ಯಗಳನ್ನು ಮಾಡಿದ್ದಾರೆ. ಸಂಕಷ್ಟದಲ್ಲಿರುವವರಿಗೆ ನಟಿ ನೆರವಾಗಿದ್ದಾರೆ. ಕೋವಿಡ್ ಸಂಕಷ್ಟದಲ್ಲೀ ಪ್ರಣಿತಾ ಅವರು ನೂರಾರು ಕುಟುಂಬಗಳಿಗೆ ಸಹಾಯದ ಹಸ್ತ ಚಾಚಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply