LATEST NEWS
ಮತಾಂತರಕ್ಕೆ ಇಡೀ ಕುಟುಂಬ ಅಂತ್ಯ…ಆರೋಪಿ ಮಹಿಳೆ ಪೊಲೀಸ್ ವಶಕ್ಕೆ…!!

ಮಂಗಳೂರು ಡಿಸೆಂಬರ್ 08: ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಮತಾಂತರಕ್ಕೆ ಒತ್ತಾಯವೇ ಇಡೀ ಕುಟುಂಬ ಅಂತ್ಯವಾಗಲು ಕಾರಣ ಎಂದು ಹೇಳಲಾಗಿದ್ದು. ಡೆತ್ ನೋಟ್ ನಲ್ಲಿ ಮತಾಂತರದ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೂಲತಃ ಬಾಗಲಕೋಟೆ ಬೀಳಗಿಯ ಸುನಗ್ ಗ್ರಾಮದವರಾಗಿದ್ದ ಕುಟುಂಬ ಕಳೆದ ೮ ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿತ್ತು. ನಾಗೇಶ್ ಡ್ರೈವರ್ ಆಗಿ ದುಡಿಯುತ್ತಿದ್ದರೆ , ವಿಜಯಲಕ್ಷ್ಮಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ನಾಗೇಶ್ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿದ್ದರೆ, ವಿಜಯಲಕ್ಷ್ಮೀ ಮತ್ತು ಮಕ್ಕಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ

ಈ ಘಟನೆ ಕುರಿತು ಮಾತನಾಡಿರುವ ಪೊಲೀಸ್ ಆಯುಕ್ತ ಶಶಿಕುಮಾರ್ ಡೆತ್ ನೋಟ್ ನಲ್ಲಿರುವ ಮಾಹಿತಿಯಂತೆ ಮತಾಂತರ ಭೀತಿ ಹಾಗೂ ಕೌಟುಂಬಿಕ ಕಲಹ ಆತ್ಮಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ ಎಂದಿದ್ದು, ಮತಾಂತರ ವಿಚಾರಕ್ಕೆ ನಾಗೇಶ್ ಹೆಂಡತಿಗೆ ಹಲ್ಲೆ ಮಾಡಿದ್ದ ಎಂದು ಹೇಳಲಾಗಿದ್ದು, ಹೀಗಾಗಿ ಕಳೆದ ಎರಡು ತಿಂಗಳ ಹಿಂದೆ ಪತ್ನಿ ಮನೆ ಬಿಟ್ಟು ಹೋಗಿದ್ದು ಬಳಿಕ ಆಕೆಯನ್ನು ಪತ್ತೆ ಹಚ್ಚಿ ಪೊಲೀಸ್ ಠಾಣೆಯಲ್ಲಿ ದಂಪತಿಗಳಿಗಿಬ್ಬರಿಗೂ ಬುದ್ದಿ ಹೇಳಿ ಸರಿಪಡಿಸಲಾಗಿತ್ತು.
ನಾಗೇಶ್ ಶೇರಿಗುಪ್ಪ ಬರೆದ ಡೆತ್ ನೋಟ್ ನಲ್ಲಿ ನೂರ್ ಜಹಾನ್ ಎಂಬ ಮಹಿಳೆಯ ಹೆಸರನ್ನು ಉಲ್ಲೇಖಿಸಿದ್ದು , ಆಕೆಯೇ ನಮ್ಮ ಸಾವಿಗೆ ಕಾರಣ. ಪತ್ನಿಯನ್ನು ತನ್ನ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸುತ್ತಿದ್ದಾಳೆ. ಇದೇ ಕಾರಣಕ್ಕೆ ಪತ್ನಿ ವಿಜಯಲಕ್ಷ್ಮಿ ಆಗಾಗ ಮನೆ ಬಿಟ್ಟು ಹೋಗುತ್ತಿದ್ದಳು ಎಂದು ನಾಗೇಶ್ ಆರೋಪಿಸಿದ್ದಾರೆ. ವಿಜಯಲಕ್ಷ್ಮಿ ನೂರ್ ಜಹಾನ್ ಮನೆಯಲ್ಲಿ ಮನೆ ಕೆಲಸಮಾಡುತ್ತಿದ್ದು ಪ್ರಕರಣಕ್ಕೆ ಸಂಬಂಧಿಸಿ ನೂರ್ಜಾನ್ ನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ ” ಎಂದು ಮಾಹಿತಿ ನೀಡಿದ್ದಾರೆ.