Connect with us

DAKSHINA KANNADA

ಮೋದಿ ಕಾರ್ಯಕ್ರಮಕ್ಕೆ ಬಲವಂತವಾಗಿ ಜನರಿಗೆ ಆಹ್ವಾನ – ಯು.ಟಿ.ಖಾದರ್‌ ಆರೋಪ

ಮಂಗಳೂರು, ಆಗಸ್ಟ್ 31: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಜನರನ್ನು ಬಲವಂತವಾಗಿ ಆಹ್ವಾನಿಸಲಾಗುತ್ತಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್‌ ಗಂಭೀರ ಆರೋಪ ಮಾಡಿದ್ದಾರೆ.

ಕಾರ್ಯಕ್ರಮ ನಡೆಯುವ ಮೈದಾನ ಸಾಕಾಗುತ್ತಾ ಇಲ್ವಾ ಎನ್ನುವ ಪ್ರಶ್ನೆ ಎದುರಾಗಿದೆ. ಮೈದಾನಕ್ಕಿಂತ ದೊಡ್ಡ ಜಾಗ ಬೇಕು ಅಂತಾ ಕಾಣಿಸುತ್ತಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಪಿಡಿಒಗಳಿಗೆ ನೋಟಿಸ್ ಕಳುಹಿಸಲಾಗಿದೆ.‌ ಪ್ರತಿ ಗ್ರಾಮದಿಂದ 250 ಜನರನ್ನು ಕರೆತರಲು ಜಿಲ್ಲಾಡಳಿತ ಸೂಚನೆ ನೀಡಿದೆ ಎಂದು ತಿಳಿಸಿದ್ದಾರೆ.

ಕಂದಾಯ ಇಲಾಖೆಯಿಂದ ವಿಎ ಸೇರಿದಂತೆ ಎಲ್ಲಾ ಅಧಿಕಾರಿಗಳು ಬರಬೇಕು ಅಂತಾ ಸೂಚನೆ ನೀಡಲಾಗಿದೆ. ಗ್ರಾಪಂ ಕಾರ್ಯದರ್ಶಿ, ಲೈನ್ ಮ್ಯಾನ್, ನೀರು ಬಿಡುವವನಿಗೂ ನೋಟಿಸ್ ಹೋಗಿದೆ.‌ ಶಾಲೆ-ಕಾಲೇಜುಗಳಿಗೆ ರಜೆ ನೀಡಿ ಎಲ್ಲಾ ಮಕ್ಕಳೂ ಕಾರ್ಯಕ್ರಮದಲ್ಲಿ ಬರಬೇಕು ಅಂತಾ ತಿಳಿಸಲಾಗಿದೆ. ಎಲ್ಲಾ ಬ್ಯಾಂಕ್‌ಗಳಿಗೆ ಸೂಚನೆ ನೀಡಿ, ಬ್ಯಾಂಕ್ ಸವಲತ್ತು ಪಡೆದವರನ್ನು ಕರೆತರಬೇಕೆಂದು ಸೂಚಿಸಲಾಗಿದೆ ಎಂದು ವಿವರಿಸಿದ್ದಾರೆ.

ಜಿಲ್ಲಾಧಿಕಾರಿ ಸೂಚನೆ ನೀಡಿದಾಗ ಕೆಳ ಅಧಿಕಾರಿಗಳು ಜನರನ್ನು ಕರೆತರಲೇಬೇಕು. ಇಲ್ಲವಾದಲ್ಲಿ ಅಧಿಕಾರಿಗಳು ಅವರ ಮನೆಯವರನ್ನಾದರೂ ಕರೆತರಬೇಕು. ಒಂದು ವಾರದಿಂದ ಎಲ್ಲಾ ಅಧಿಕಾರಿಗಳು ಬ್ಯುಸಿ ಇದ್ದಾರೆ. ಎಲ್ಲಾ ಸಿಕ್ಕ‌ಸಿಕ್ಕ ಮೀನುಗಾರರಿಗೂ ಕಿಸಾನ್ ಕಾರ್ಡ್ ನೀಡಿ ಕಾರ್ಯಕ್ರಮಕ್ಕೆ ಬರಲು ಸೂಚಿಸಿದ್ದಾರೆ. ಇಷ್ಟೆಲ್ಲಾ ಸೂಚನೆ ನೀಡಿದ ಬಳಿಕ ಜನಸಾಗರವೇ ಬರಲಿದೆ. ಜನರಿಗೆ ಯಾವುದೇ ತೊಂದರೆ ಆಗದಂತೇ ಜಿಲ್ಲಾಡಳಿತ ಕ್ರಮ ಜರುಗಿಸಬೇಕು ಎಂದು ಲೇವಡಿ ಮಾಡಿದ್ದಾರೆ.

Advertisement
Click to comment

You must be logged in to post a comment Login

Leave a Reply