LATEST NEWS
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5.88 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ವಶ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5.88 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ವಶ
ಮಂಗಳೂರು ಸೆಪ್ಟೆಂಬರ್ 16: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈ ಪ್ರಯಾಣಿಕ ನಿಂದ ಲಕ್ಷಾಂತರ ಮೌಲ್ಯದ ವಿದೇಶಿ ಕರೆನ್ಸಿಯನ್ನು ಸಿಐಎಸ್‌ಎಫ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ.
ಹ್ಯಾರಿ ಸ್ಟೆಫನ್ ಆ್ಯಂತೋನಿ ಡಿಸೋಜ ಬಂಧಿತ ಆರೋಪಿ. ಆತನಿಂದ 5.88 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ವಶಕ್ಕೆ ಪಡೆಯಲಾಗಿದೆ. ರವಿವಾರ ಸಂಜೆ 7 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ದುಬೈಗೆ ತೆರಳಲು ಯತ್ನಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ತಪಾಸಣೆ ನಡೆಸಿದರು.

ಪ್ರಯಾಣಿಕನಿಂದ 2.93 ಲಕ್ಷ ದಿರಾಂ, 2.94 ಲಕ್ಷ ಮೌಲ್ಯದ ಡಾಲರ್ ವಿದೇಶಿ ಕರೆನ್ಸಿ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ವೌಲ್ಯ 5.88 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈತನನ್ನು ವಿಚಾರಣೆಗೆ ಕಸ್ಟಮ್ಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.