KARNATAKA
ಮಡಿಕೇರಿಯಲ್ಲಿ ಅರಣ್ಯ ಇಲಾಖೆಯ ಮಹಿಳಾ ಅಧಿಕಾರಿ ಆತ್ಮಹತ್ಯೆ..!
ಮಡಿಕೇರಿಯ ಅರಣ್ಯ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ನಗರದ ಅರಣ್ಯ ಇಲಾಖೆ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮಡಿಕೇರಿ : ಮಡಿಕೇರಿಯ ಅರಣ್ಯ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ನಗರದ ಅರಣ್ಯ ಇಲಾಖೆ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮಂಡ್ಯ ಮೂಲದ ಅರಣ್ಯ ಇಲಾಖೆ ಡಿಎಫ್‌ಒ ರಶ್ಮಿ(27) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯಾಗಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣಗಳು ಏನೆಂದು ತಿಳಿದು ಬಂದಿಲ್ಲ.
ರಶ್ಮಿ ಅವರು ಕಳೆದ 2 ವರ್ಷಗಳಿಂದ ಕೊಡಗಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ.
ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಡಿಕೇರಿ ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.