Connect with us

    KARNATAKA

    ಮಾಜಿ ಸಿಎಂ ಯಡಿಯೂರಪ್ಪ ನವರ ಮೊಮ್ಮಗಳು ನೇಣು ಬಿಗಿದು ಆತ್ಮಹತ್ಯೆ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮೊಮ್ಮಗಳು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಬಿಎಸ್‍ವೈ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ತಮ್ಮ ಅಪಾರ್ಟ್‍ಮೆಂಟ್‌ನಲ್ಲಿ ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


    ಸೌಂದರ್ಯ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದರು. 2018ರಲ್ಲಿ ವೈದ್ಯ ಡಾ. ನೀರಜ್‌ ಅವರನ್ನು ಸೌಂದರ್ಯ ಮದುವೆಯಾಗಿದ್ದರು. ಮೃತ ಸೌಂದರ್ಯಗೆ ಒಂದು ಮಗು ಇದೆ. ಸೌಂದರ್ಯ ಪತಿ ನೀರಜ್ ಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗಿದ್ದರು. ಇತ್ತ ಸೌಂದರ್ಯ 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಡಾ. ನೀರಜ್ ಅವರು ಆಸ್ಪತ್ರೆಗೆ ಹೋಗಿದ್ದರು. ಕೆಲಸ ಮುಗಿಸಿಕೊಂಡು ಮನೆಗೆ ವಾಪಸು ಬಂದಾಗ ಸೌಂದರ್ಯ ಬಾಗಿಲು ತೆರೆದಿರಲಿಲ್ಲ. ಒಳಗಿನಿಂದ ಬಾಗಿಲು ಲಾಕ್‌ ಮಾಡಲಾಗಿತ್ತು. ಅನುಮಾನಗೊಂಡ ನೀರಜ್, ಪರಿಚಯಸ್ಥರ ಮೂಲಕ ಪೊಲೀಸರನ್ನು ಸಂಪರ್ಕಿಸಿ ಸ್ಥಳಕ್ಕೆ ಕರೆಸಿಕೊಂಡಿದ್ದರು. ಬಾಗಿಲು ತೆರದು ನೋಡಿದಾಗ, ಕೊಠಡಿಯಲ್ಲಿ ಸೌಂದರ್ಯ ಅವರ ಮೃತದೇಹ ನೇಣು ಬಿಗಿದಿದ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ನಂತರ, ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ಸಾಗಿಸಲಾಗಿದೆ. ಇದೊಂದು ಆತ್ಮಹತ್ಯೆ ಎಂಬುದು ಗೊತ್ತಾಗುತ್ತಿದ್ದು, ಕಾರಣ ಪತ್ತೆ ಮಾಡಲಾಗುತ್ತಿದೆ’ ಎಂದೂ ಮೂಲಗಳು ತಿಳಿಸಿವೆ.

    Share Information
    Advertisement
    Click to comment

    You must be logged in to post a comment Login

    Leave a Reply